ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕಿನ ಮಹಾರಾಜಪೇಟೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟ ಘಟನೆ ನಡೆದಿದೆ.
Advertisement
ನಾಗರಾಜ ಲಕ್ಕಪ್ಪ ಮುತ್ನಾಳ(22) ಮೃತ ಯುವಕ. ಹೊಲದಲ್ಲಿ ಕುರಿ ಮೇಯಿಸಲು ತೆರಳಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಂಜೆ 5 ಗಂಟೆ ವೇಳೆಗೆ ರಭಸವಾದ ಮಳೆ-ಗಾಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹಾನಗಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.