ನವದೆಹಲಿ: ಇತ್ತೀಚಿನ ದಿನಗಳಲ್ಲಿ ವಿಮಾನ, ವಿಮಾನ ನಿಲ್ದಾಣದ ಸುದ್ದಿಗಳೇ ಭಾರಿ ಪ್ರಚಲಿತದಲ್ಲಿವೆ.
ಮೊನ್ನೆ ಮೊನ್ನೆಯಷ್ಟೇ ಪ್ರಯಾಣಿಕನೊಬ್ಬ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿರುವುದು ಮಾಸುವ ಮುನ್ನವೇ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲೇ ಪಾನಮತ್ತ ವ್ಯಕ್ತಿಯೊಬ್ಬ ಸಾರ್ವಜನಿಕರ ಎದುರೇ ಮೂತ್ರ ವಿಸರ್ಜನೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿಚಾರ ತಿಳಿದ ಪೊಲೀಸರು ಪಾನಮತ್ತ ವ್ಯಕ್ತಿಯನ್ನು ಬಂಧಿಸಿ ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕಳೆದ ಭಾನುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಸಂಖ್ಯೆ 3 ರಲ್ಲಿ ಬಿಹಾರ ಮೂಲದ ಜೌಹರ್ ಅಲಿ ಖಾನ್ ಪಾನಮತ್ತನಾಗಿ ನಿರ್ಗಮನ ದ್ವಾರದ ಬಳಿ ಸಾರ್ವಜನಿಕರ ಎದುರೇ ಮೂತ್ರ ವಿಸರ್ಜನೆ ಮಾಡಿದ್ದಾನೆ ಇದರಿಂದ ಅಲ್ಲಿದ್ದ ಪ್ರಯಾಣಿಕರಿಗೆ ಮುಜುಗರವೂ ಆಗಿದೆ ಈ ವಿಚಾರ ಅಲ್ಲಿನ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಪಾನಮ್ಮತನಾಗಿರುವುದು ಬೆಳಕಿಗೆ ಬಂದಿದೆ, ಅಲ್ಲದೆ ಆತ ಸೌದಿ ಅರೇಬಿಯಾದ ದಮಾಮ್‌ಗೆ ಪ್ರಯಾಣಿಸುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294 ಮತ್ತು 510 (ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು ಬಳಿಕ ಅದೇ ದಿನ ಜಾಮೀನಿನ ಮೇಲೆ ಆತನನ್ನು ಬಿಡುಗಡೆಗೊಳಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಪ್ಯಾರಿಸ್ ನಿಲ್ದಾಣದಲ್ಲಿ ಹಲವರಿಗೆ ಇರಿದ ದುಷ್ಕರ್ಮಿ ಪೊಲೀಸರ ಗುಂಡಿಗೆ ಬಲಿ