ಥಾಣೆ: ಚಹಾದೊಂದಿಗೆ ಬೆಳಗ್ಗಿನ ತಿಂಡಿಯನ್ನು ನೀಡಲಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ತನ್ನ ಸೊಸೆಗೆ ರಿವಾಲ್ವರ್ ನಿಂದ ಗುಂಡು ಹಾರಿಸಿದ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
42 ವರ್ಷದ ಮಹಿಳೆಯ ಹೊಟ್ಟೆಯಲ್ಲಿ ಗುಂಡು ತಗುಲಿದ್ದು, ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕಾಶಿನಾಥ ಪಾಂಡುರಂಗ ಪಾಟೀಲ (76 ವ) ಎಂಬಾತನ ಮೇಲೆ ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಸಂತೋಷ್ ಘಾಟೇಕರ್ ತಿಳಿಸಿದ್ದಾರೆ.
ಇದನ್ನೂ ಓದಿ:ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು : ಮೂವರಿಗೆ ಗಾಯ
ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಆರೋಪಿಯ ಮತ್ತೊಬ್ಬ ಸೊಸೆ ನೀಡಿದ ದೂರನ್ನು ಉಲ್ಲೇಖಿಸಿದ ಅಧಿಕಾರಿ ತಿಳಿಸಿದ್ದಾರೆ.
ಬೆಳಗಿನ ಚಹಾದ ಜೊತೆಗೆ ಸೊಸೆ ತನಗೆ ಉಪಹಾರವನ್ನು ನೀಡದೇ ಇದ್ದುದರಿಂದ ಆರೋಪಿಯು ಸಿಟ್ಟಾಗಿದ್ದನು. ಪರಿಣಾಮ ರಿವಾಲ್ವರ್ ಅನ್ನು ಹೊರತೆಗೆದು ತನ್ನ ಸೊಸೆಯ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ, ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.