Advertisement

ನೆಲಮಂಗಲ: ಬಿಜೆಪಿ ಪ್ರತಿಭಟನೆ ವೇಳೆ ಕಾಂಗ್ರೆಸ್ ಬಾವುಟ ಹಾರಿಸಿದ ಏಕಾಂಗಿ!

02:08 PM Feb 28, 2022 | Team Udayavani |

ನೆಲಮಂಗಲ: ನಗರದಲ್ಲಿ ಕಾಂಗ್ರೆಸ್ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಾಂಗ್ರೆಸ್ ಬಾವುಟ ಹಾರಿಸಿ ಘೋಷಣೆ ಕೂಗಿದ ಘಟನೆ ನಡೆದಿದೆ.

Advertisement

ನೂರಾರು ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಏಕಾಏಕಿ ಕಾಂಗ್ರೆಸ್ ಬಾವುಟ ಹಿಡಿದು ಘೋಷಣೆ ಕೂಗುತ್ತಾ ವ್ಯಕ್ತಿ ಎದುರಿಗೆ ಬಂದಿದ್ದಾನೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ವ್ಯಕ್ತಿಯ ಬಳಿ ಇದ್ದ ಕಾಂಗ್ರೆಸ್ ಬಾವುಟ ಕಿತ್ತುಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಗೊಂದಲ ನಿರ್ಮಾಣವಾಯಿತಲ್ಲದೆ,ಬಿಜೆಪಿ ಕಾರ್ಯಕರ್ತರು ತೀವ್ರ ಮುಜುಗರಕ್ಕೆ ಒಳಗಾದರು.

ಮೇಕೆದಾಟು ಪಾದಯಾತ್ರೆ ವಿರೋಧಿಸಿ, ಸದನಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾಂಗ್ರೆಸ್ ಪಕ್ಷ ಕಾರಣ. ಹಿಜಾಬ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು
ತಾಲೂಕು ಕಚೇರಿ ಮುಂದೆ ಆಕ್ರೋಶ ಹೊರ ಹಾಕಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next