Advertisement

ತಂದೆ ಮತ್ತು ಮಗನಿಂದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ರೇಪ್

08:58 PM Jan 30, 2022 | Team Udayavani |

ಥಾಣೆ: ನಗರದಲ್ಲಿ 16 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ಕ್ರ್ಯಾಪ್ ಡೀಲರ್ ಮತ್ತು ಆತನ ಮಗನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

Advertisement

ಶನಿವಾರದಂದು ದೂರು ದಾಖಲಿಸಿದ ನಂತರ ಅವರಿಬ್ಬರ ವಿರುದ್ಧ ಐಪಿಸಿ ಮತ್ತು ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಕೋಲ್ಸೆವಾಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

53 ವರ್ಷದ ಸ್ಕ್ರ್ಯಾಪ್ ಡೀಲರ್ ಮತ್ತು ಆತನ 23 ವರ್ಷದ ಮಗ ತನ್ನ ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ ತನ್ನ ಮೇಲೆ ಅತ್ಯಾಚಾರವೆಸಗುತ್ತಿದ್ದರು ಎಂದು ಸಂತ್ರಸ್ತೆ ಹೇಳಿರುವುದು ದೂರಿನಲ್ಲಿ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next