Advertisement

Vote ಹಾಕಲು ಅಮೆರಿಕದಿಂದ ಲಕ್ಷಾಂತರ ರೂ ಖರ್ಚು ಮಾಡಿ ಬಂದರು, ಆದರೆ ಆಗಿದ್ದೇ ಬೇರೆ!

11:55 AM May 10, 2023 | Team Udayavani |

ದಾವಣಗೆರೆ: ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ.

Advertisement

ಅಮೆರಿಕಾದಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಆಗಿರುವ ರಾಘವೇಂದ್ರ ಕಮಾಲಕರ್ ಮತದಾನಕ್ಕಾಗಿಯೇ ದಾವಣಗೆರೆಗೆ ಬಂದಿದ್ದಾರೆ. ಆದರೆ, ಅವರ ಹೆಸರೇ ಮತದಾನದ ಪಟ್ಟಿಯಲ್ಲಿ ಇರಲಿಲ್ಲ. ಹೀಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ.

ಜನವರಿ ತಿಂಗಳಲ್ಲಿ ನನ್ನ ಹೆಸರು ಪಟ್ಟಿಯಲ್ಲಿತ್ತು. ನನಗೆ ಮಾಹಿತಿಯೂ ಬಂದಿತ್ತು. ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ನಾನು ಮತ ಚಲಾಯಿಸಲು ಬಂದಾಗ ಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ. ಮತದಾನ ಮಾಡಲಿಕ್ಕೆ ಆಗಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಮತದಾನ ಮಾಡುವ ಸಲುವಾಗಿಯೇ ಅಮೇರಿಕಾದಿಂದ ಸುಮಾರು ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದಿದ್ದೇನೆ ಆದರೆ ನನಗೆ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಅದನ್ನರಿತು ಮತ ಚಲಾಯಿಸಲು ಬಂದಿದ್ದೆ ಆದರೆ ಮತಹಾಕಲು‌ ಸಾಧ್ಯವಾಗಲಿಲ್ಲ ಎಂದರು

Advertisement

Udayavani is now on Telegram. Click here to join our channel and stay updated with the latest news.

Next