ಚಂಡೀಗಢ: ಪಂಜಾಬ್ ನ ಸ್ವರ್ಣ ಮಂದಿರದಲ್ಲಿ ನಡೆದ ಹತ್ಯಾಕಾಂಡದ ಘಟನೆಯ ಬಳಿಕ ಹೆಚ್ಚಿದ ಉದ್ವಿಗ್ನತೆಯ ನಡುವೆ, ಕಪುರ್ತಲಾ ಜಿಲ್ಲೆಯ ಗುರುದ್ವಾರದಿಂದ ಧಾರ್ಮಿಕ ಧ್ವಜವನ್ನು ತೆಗೆಯಲು ಯತ್ನಿಸಿದ ವ್ಯಕ್ತಿಯನ್ನು ಸಿಖ್ ಭಕ್ತರು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಕಪುರ್ತಲದ ನಿಜಾಂಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಈ ವ್ಯಕ್ತಿ ನಿಜಾಂಪುರದ ಗುರುದ್ವಾರದಲ್ಲಿ ಸಿಖ್ಖರ ಧಾರ್ಮಿಕ ಧ್ವಜವಾದ ನಿಶಾನ್ ಸಾಹಿಬ್ ಅನ್ನು ತೆಗೆದುಹಾಕಲು ಪ್ರಯತ್ನಿಸಿದನು. ಆತನನ್ನು ಭಕ್ತರು ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ.
“ಪೊಲೀಸರು ಮತ್ತು ಇತರ ಯಾವುದೇ ಏಜೆನ್ಸಿಗಳು ಮಧ್ಯಪ್ರವೇಶಿಸಬಾರದು. ಪಂಜಾಬ್ ಪೊಲೀಸರು ಮತ್ತು ರಾಜ್ಯ ಸರ್ಕಾರವು ಈ ಪ್ರಕರಣಗಳಿಗೆ ಸಮಾನವಾಗಿ ಜವಾಬ್ದಾರರಾಗಿರುತ್ತಾರೆ” ಎಂದು ಗುರುದ್ವಾರದ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ವಿರಾಟ್ ಕೊಹ್ಲಿಯ ವಿರುದ್ಧ ಆರೋಪ ಮಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಇದು ಪಂಜಾಬ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ವರದಿಯಾದ ಎರಡನೇ ದಾರುಣ ಪ್ರಕರಣವಾಗಿದೆ. ಶನಿವಾರ ಸಂಜೆ, ಅಮೃತಸರದ ಗೋಲ್ಡನ್ ಟೆಂಪಲ್ ನೊಳಗೆ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ನಂತರ ವ್ಯಕ್ತಿಯೊಬ್ಬನನ್ನು ಹೊಡೆದು ಸಾಯಿಸಲಾಯಿತು.
ಅಮೃತಸರ ಪೊಲೀಸರು ಗೋಲ್ಡನ್ ಟೆಂಪಲ್ ಕಾಂಪ್ಲೆಕ್ಸ್ ಮತ್ತು ಸುತ್ತಮುತ್ತ ಕಟ್ಟೆಚ್ಚರ ವಹಿಸಿದ್ದಾರೆ.