Advertisement

ವರ್ಗಾವಣೆ : ಮನನೊಂದು ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ

05:55 PM Apr 10, 2021 | Team Udayavani |

ಮಳವಳ್ಳಿ : ಕೆಲಸಕ್ಕೆ ಹಾಜರಾಗದ ಸಿಬ್ಬಂದಿಗಳಿಗೆ ವರ್ಗಾವಣೆ ಮಾಡಿರುವ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಸಾರಿಗೆ ನೌಕರನೊಬ್ಬ ವಿಷಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಳವಳ್ಳಿ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಹಿಂಭಾಗ ನಡೆದಿದೆ.

Advertisement

ಪಟ್ಟಣದ ಸಿದ್ದಾರ್ಥ ನಗರದ ಎಂ.ಪಿ.ರವಿಶಂಕರ್ ಆತ್ನಹತ್ಯೆಗೆ ಯತ್ನಿಸಿದ ನೌಕರ. 2 ದಿನದ ಹಾಜರಾತಿ ಕಡಿತ ಮತ್ತು ತಮ್ಮ 4 ಮಂದಿ ಸಹಪಾಠಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ರವಿಶಂಕರ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಳೆದ ನಾಲ್ಕು ದಿನಗಳಿಂದ ಸಾರಿಗೆ ಇಲಾಖೆ ನೌಕರರ ಮುಷ್ಕರ ನಡೆಸುತ್ತಿರುವುದರಿಂದ ಯಾವುದೇ ನೌಕರರು ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿಬ್ಬಂದಿಗಳನ್ನು ಪೋನ್ ಕರೆಯ ಮೂಲಕ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದ್ದಾರೆ. ಇದಕ್ಕೆ ಒಪ್ಪದ 4 ಮಂದಿ ನೌಕಕರನ್ನು ಬೇರೆಡೆಗೆ ವರ್ಗಾವಣೆ ಮಾಡುವುದರ ಜತೆಗೆ ಕೆಲಸಕ್ಕೆ ಅನುತೀರ್ಣ ಹಾಕಿದ್ದಾರೆ. ಇದರಿಂದ ಮನನೊಂದು ಕೆಎಸ್‌ಆರ್‌ಸಿಸಿ ಡಿಪೋ ಹಿಂಭಾಗ ರವಿಶಂಕರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣ ಸಾರಿಗೆ ನೌರರನನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next