Advertisement

ಐಪಿಎಲ್ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಯುವಕನ ಬಂಧನ

07:11 PM Apr 10, 2022 | Team Udayavani |

ಪುಣೆ : ಇಲ್ಲಿನ ಗಹುಂಜೆಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದ ವೇಳೆ ಪ್ರವೇಶಿಸಿದ ಸತಾರಾ ಜಿಲ್ಲೆಯ 26 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಶನಿವಾರದ ಪಂದ್ಯದ ವೇಳೆ ಯುವಕ ಕ್ರೀಡಾಂಗಣದೊಳಗೆ ನುಗ್ಗಿದ್ದ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲು ಈ ರೀತಿ ಮಾಡಿದ್ದ.

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂಗೆ ಬಂಧಿತ ದಶರಥ್ ಜಾಧವ್ ಓಡಿಹೋಗಿ, ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿಯವರನ್ನು ಮುಷ್ಟಿಯಿಂದ ಮುಷ್ಟಿಗೆ ಬಡಿದು, ರೋಹಿತ್ ಶರ್ಮಾ ಕಡೆಗೆ ತೆರಳಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಧವ್ ನನ್ನು ಮೈದಾನದಿಂದ ಹೊರಗೆ ಕರೆದೊಯ್ಯುವಾಗ ಪೊಲೀಸರೊಂದಿಗೆ ವಾಗ್ವಾದದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಮತ್ತು 353 (ಸಾರ್ವಜನಿಕ ನೌಕರನ ಕರ್ತವ್ಯ ನಿರ್ವಹಣೆಯನ್ನು ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ ಎಂದು ತಾಳೇಗಾಂವ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮಧುಕರ್ ಸಾವಂತ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next