ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕಳ್ಳಭಟ್ಟಿ ಸೇವಿಸಿ 55 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ (ಜೂನ್ 22) ಕಳ್ಳಭಟ್ಟಿ ಸರಬರಾಜು ಮಾಡಿದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:Siwan: ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ! ವಿಡಿಯೋ ವೈರಲ್
ಚಿನ್ನದೊರೈ ಎಂಬ ವ್ಯಕ್ತಿ ಕರುಣಾಪುರಂಗೆ ಕಳ್ಳಭಟ್ಟಿಯನ್ನು ಸರಬರಾಜು ಮಾಡಿದ್ದು, ಇದರ ಪರಿಣಾಮ ಕಲ್ಲಕುರಿಚಿ ಗ್ರಾಮದಲ್ಲಿ ಈ ಕಳ್ಳಭಟ್ಟಿ ಕುಡಿದು ಸುಮಾರು 55 ಮಂದಿ ಸಾವನ್ನಪ್ಪಿದ್ದರು.
ಈ ಘಟನೆ ನಡೆದ ನಂತರ ಈವರೆಗೂ ಹಲವಾರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ವಿವರಿಸಿದೆ. ಈಗಾಗಲೇ 29 ಶವಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದ್ದು, ಅವರ ಶವ ಸಂಸ್ಕಾರ ನಡೆದಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಎಂಎಸ್ ತಿಳಿಸಿದ್ದಾರೆ.
ಇನ್ನೂ ಕೆಲವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಘಟನೆಗೆ ಸಂಬಂಧಿಸಿದಂತೆ ಜಸ್ಟೀಸ್ ಬಿ.ಗೋಕುಲ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ತನಿಖೆಯನ್ನು ಆರಂಭಿಸಿದೆ. ಆಯೋಗ ಮೂರು ತಿಂಗಳೊಳಗೆ ವರದಿ ನೀಡುವಂತೆ ತಮಿಳುನಾಡು ಸರ್ಕಾರ ಆದೇಶ ನೀಡಿದೆ.