ಓಸ್ಲೋ (ನಾರ್ವೆ): ನಾರ್ವೆಯ ರಾಜಧಾನಿ ಓಸ್ಲೋದಲ್ಲಿ ದುಷ್ಕರ್ಮಿಯೊಬ್ಬ ಅರೆಬೆತ್ತಲೆಯಾಗಿ ಓಡಾಡುತ್ತಾ ದಾರಿಹೋಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಹಲ್ಲೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿ ಕೊಂದಿದ್ದಾರೆ. ಇದು ಸಿಂಗಲ್ ವೂಲ್ಫ್ ಮಾದರಿಯ ದಾಳಿಯಾಗಿರಬಹುದೇ ಎಂಬ ಸಂಶಯ ವ್ಯಕ್ತವಾಗಿದ್ದು, ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಬಂದಿದ್ದು, ಆತನನ್ನು ಸೆರೆ ಹಿಡಿಯಲು ಪ್ರಯತ್ನಿಸಿದ್ದಾರೆ. ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಮನೆ ಬಿಟ್ಟು ಬಂದಿದ್ದ ಕಂದಮ್ಮಳನ್ನು ಸ್ಥಳೀಯರ ಸಹಕಾರದಲ್ಲಿ ಪೋಷಕರಿಗೆ ಒಪ್ಪಿಸಿದ ಪೊಲೀಸರು
ಗಾಯಾಳುವಾದ ಹಲ್ಲೆಕೋರನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.