Advertisement
ಪ್ರಸ್ತುತ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಮಾನ ನಿಲ್ದಾಣಗಳ ಸಂಪೂರ್ಣ ನಿರ್ವಹಣೆಯನ್ನು ಖಾಸಗಿ ಕಂಪೆನಿ ಹಾಗೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಇನ್ನು ಮುಂದೆ ಕಾರ್ಯಾರಂಭಗೊಳ್ಳುವ ಶಿವಮೊಗ್ಗ, ಹಾಸನ, ವಿಜಯಪುರ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಸೇವೆ ಮತ್ತು ನಿರ್ವಹಣೆಯನ್ನು ಸರಕಾರವೇ ವಹಿಸಲು ಚಿಂತನೆ ನಡೆಸಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಕೈಗಾರಿಕಾ ಉತ್ತೇಜನಕ್ಕಾಗಿ ರಾಜ್ಯದಲ್ಲಿ ವಲಯಕ್ಕೊಂದು ವಿಜನ್ ಗ್ರೂಪ್ ರಚಿಸಲು ಸರಕಾರ ನಿರ್ಧರಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಏರೋಸ್ಪೇಸ್ ಮತ್ತು ರಕ್ಷಣೆ, ಮಷೀನ್ ಟೂಲ್ಡ್, ಇಎಸ್‌ಡಿಎಂ, ಫಾರ್ಮಾ, ಕಬ್ಬಿಣ-ಉಕ್ಕು-ಸಿಮೆಂಟ್ ಉತ್ಪಾದನಾ ಕ್ಷೇತ್ರಗಳನ್ನೊಳಗೊಂಡ ಕೋರ್ ಮ್ಯಾನುಫ್ಯಾಕ್ಚರಿಂಗ್, ಸ್ಟಾರ್ಟ್‌ಅಪ್‌ಗಳ (ಐಟಿಯೇತರ) ಮತ್ತು ಆಟೋ/ವಿದ್ಯುತ್‌ಚಾಲಿತ ವಲಯಗಳಲ್ಲಿ ವಿಜನ್ ಗ್ರೂಪ್ ರಚನೆ ಆಗಲಿವೆ. ರಾಜ್ಯದಲ್ಲಿ ಈ ಪ್ರಯೋಗ ಇದೇ ಮೊದಲು. ಇದಕ್ಕೆ ಮುನ್ನ ಒಟ್ಟಾರೆ ಉದ್ಯಮದ ಅಭಿವೃದ್ಧಿಗೆ ವಿಜನ್ ಗ್ರೂಪ್ ಇತ್ತು ಎಂದು ಸ್ಪಷ್ಟಪಡಿಸಿದರು.
Related Articles
ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್, ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಿಐಎಎಲ್‌ಗೆ, ಹುಬ್ಬಳ್ಳಿ, ಕಲಬುರಗಿ ವಿಮಾನ ನಿಲ್ದಾಣಗಳನ್ನು ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ. ಸರಕಾರವೇ ನಿರ್ವಹಣೆ ಮಾಡುವುದಾದರೂ, ವೈಮಾನಿಕ ಸಂಚಾರ ನಿಯಂತ್ರಣ (ಎಟಿಸಿ), ನೇವಿಗೇಷನ್ ಸಂವಹನ ವ್ಯವಸ್ಥೆಗೆ ಪ್ರಾಧಿಕಾರದ ಮೊರೆ ಹೋಗುವುದು ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.
Advertisement