ಮ್ಯಾಂಚೆಸ್ಟರ್: ಇಂಗ್ಲೆಂಡ್ ಸರಣಿಯ ಅಂತಿಮ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಗಾಯಗೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದ್ದು, ಜಸ್ಪ್ರೀತ್ ಬುಮ್ರಾ ಅವರು ಬೆನ್ನು ನೋವನ ಕಾರಣದಿಂದ ಈ ಪಂದ್ಯದಿಂದ ಹೊರಗುಳಿದಿದ್ದರು. ಅರ್ಶ್ ದೀಪ್ ಸಿಂಗ್ ಅವರು ಹೊಟ್ಟೆ ನೋವಿನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದಿದೆ.
ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಲಾರ್ಡ್ಸ್ ಪಂದ್ಯದಲ್ಲಿ ಆಡಿದ ತಂಡವನ್ನೇ ಉಳಿಸಿಕೊಳ್ಳಲಾಗಿದೆ. ಸರಣಿ ಇದೀಗ 1-1ರಿಂದ ಸಮಬಲವಾಗಿದ್ದು, ಈ ಪಂದ್ಯ ಗೆದ್ದವರು ಸರಣಿ ಜಯಿಸುತ್ತಾರೆ.
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾ/ ವಿ.ಕೀ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಭಾರತ: ರೋಹಿತ್ ಶರ್ಮಾ(ನಾ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ