Advertisement

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

05:07 PM May 21, 2024 | Shreeram Nayak |

ತೀರ್ಥಹಳ್ಳಿ : ತೀರ್ಥಹಳ್ಳಿ-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಯೊಂದು ಓವರ್‌ ಟೇಕ್‌ ಮಾಡುವ ಭರದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಸಂಭವಿಸಿದೆ.

Advertisement

ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌ ಚಾಲಕ ಎದುರಿಗೆ ಸಾಗುತ್ತಿದ್ದ ವಾಹನವನ್ನ ಓವರ್‌ ಟೇಕ್‌ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತನ ನಿಯಂತ್ರಣ ತಪ್ಪಿದ ಬಸ್‌ ಇನ್ನೊಂದು ವಾಹನಕ್ಕೆ ಡಿಕ್ಕಿಯಾಗಿ ರಸ್ತೆ ಪಕ್ಕದ ಮರವೊಂದಕ್ಕೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಮಗುವು ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿ ಎನ್ನಲಾಗಿದೆ. ಇನ್ನೂ ಘಟನೆಯಲ್ಲಿ ಬಸ್‌ನ ಒಂದು ಬದಿ ಬಹುತೇಕ ನುಜ್ಜುಗುಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next