Advertisement

ಪೊಲೀಸರಿಗೆ ಕಡ್ಡಾಯವಾಗಿ ತಪಾಸಣೆ ನಡೆಸಿ: ಬೊಮ್ಮಾಯಿ

07:45 AM May 17, 2020 | Lakshmi GovindaRaj |

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಕಂಟೇನ್ಮೆಂಟ್‌ ವಲಯ, ಚೆಕ್‌ಪೋಸ್ಟ್‌ ಹಾಗೂ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಕಡ್ಡಾಯವಾಗಿ ಕೋವಿಡ್‌ 19 ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅಲ್ಲದೆ ಕೊರೊನಾ ಸೋಂಕಿನಿಂದ ಪೊಲೀಸ್‌ ಸಿಬ್ಬಂದಿ ಮೃತಪಟ್ಟರೆ 30 ಲಕ್ಷ ವಿಮೆ ನೀಡುವುದು.

Advertisement

ಕೊರೊನಾ ನಿಯಂತ್ರಣ ಕರ್ತವ್ಯದ ಸಂದರ್ಭದಲ್ಲಿ ಬೇರೆ ಯಾವುದೇ ರೀತಿಯ ಅಪಘಾತದಿಂದ ಮರಣ ಹೊಂದಿದರೆ ಅವರಿಗೂ ವಿಮೆ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಪೊಲೀಸರಿಗೂ ಪಿಪಿಇ ಕಿಟ್‌ ವಿತರಿಸುವುದು. ಕಂಟೇನ್ಮೆಂಟ್‌ ವಲಯದಲ್ಲಿ ಕಾರ್ಯ  ನಿರ್ವಹಿಸುತ್ತಿರುವ ಪೊಲೀಸರಿಗೆ ವಿಶ್ರಾಂತಿ ಒದಗಿಸಲು ಶಿಪ್ಟ್ ಮೇಲೆ ಕರ್ತವ್ಯ ನಿರ್ವಹಿಸಲು ಕ್ರಮ ಕೈಗೊಳ್ಳುವುದು.

ಕಂಟೇನ್ಮೆಂಟ್‌ ವಲಯ, ಚೆಕ್‌ ಪೋಸ್ಟ್‌, ಕೊರೊನಾ ನಿಯಂತ್ರಣ ಆಸ್ಪತ್ರೆಗಳ ಬಳಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ  ಊಟ, ಉಪಾಹಾರ, ನೀರು ಸೇರಿ ಅಗತ್ಯ ಸೌಕರ್ಯಗಳು ದೊರೆಯುಂತೆ ನೋಡಿಕೊಂಡು ಹಿರಿಯ ಅಧಿಕಾರಿಗಳು ಕೆಳ ಹಂತದ ಸಿಬ್ಬಂದಿ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮನೋಬಲ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next