Advertisement

ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ ಮಾಡಿ

09:58 AM Jun 23, 2020 | Suhan S |

ಕೂಡ್ಲಿಗಿ: ಜೂ. 25ರಂದು ನಡೆಯಲಿರುವ 10ನೇ ತರಗತಿ ಪರೀಕ್ಷೆ ಅಂಗವಾಗಿ ತಾಲೂಕು ಕಚೇರಿಯಲ್ಲಿ ಶನಿವಾರ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

Advertisement

ತಹಶೀಲ್ದಾರ ಎಸ್‌. ಮಹಬಲೇಶ್ವರ ಮಾತನಾಡಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಕಡ್ಡಾಯವಾಗಿ ಪರೀಕ್ಷೆ ಕೇಂದ್ರಗಳಲ್ಲಿ ಪ್ರತಿ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್ ಧರಿಸಿ ಪರೀಕ್ಷೆ ಕೇಂದ್ರದ ಒಳಗೆ ಬಿಡಬೇಕು. ಕಂಟೇನ್ಮೆಂಟ್‌ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು. ಇತರೆ ವಿದ್ಯಾರ್ಥಿಗಳಲ್ಲಿ ಆರೋಗ್ಯದಲ್ಲಿ ವ್ಯಾತ್ಯಾಸ ಕಂಡುಬಂದರೆ ಅಂಥ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಸಿ ಪರೀಕ್ಷೆಯನ್ನು ಬರೆಸಬೇಕು ಎಂದರು.

ಆರೋಗ್ಯ ಸಿಬ್ಬಂದಿ ನೇಮಿಸಿ 20 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 4,340 ವಿದ್ಯಾರ್ಥಿಗಳ ಪರೀಕ್ಷೆ ಬರೆಯುತ್ತಿದ್ದು ಪರೀಕ್ಷೆ ಮುಂಚಿತವಾಗಿ ಕಡ್ಡಾಯವಾಗಿ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ಮಾಡಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಬರಲು ಸಾರಿಗೆ ವ್ಯವಸ್ಥೆ ಮಾಡಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಸಾರಿಗೆ ವ್ಯವಸ್ಥೆ ಲೋಪವಾದಲ್ಲಿ ಸಹಾಯವಾಣಿಗೆ ಫೋನ್‌ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.  ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿ ಇರುವ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎನ್‌-95 ಮಾಸ್ಕ್ಗಳನ್ನು ಪೂರೈಸುವಂತೆ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ತಾಪಂ ಇಒ ಜಿ.ಎಂ. ಬಸಣ್ಣ, ಸಿಪಿಐ ಪಂಪನಗೌಡ, ಸಂಪನ್ಮೂಲ ಶಿಕ್ಷಣಾಧಿಕಾರಿ ಜಮೀಲ್‌ ಅಹಮ್ಮದ್‌, ಕಚೇರಿ ಅಧಿಧೀಕ್ಷಕ ರೇವಣಸಿದ್ದಯ್ಯ, ಪಪಂ ಮುಖ್ಯಾಧಿ ಕಾರಿ ಸಿ. ಪಕೃದ್ಧೀನ್‌ ತಾಲೂಕು ಅಧಿಕಾರಿಗಳು ಹಾಗೂ ಪಿಡಿಒಗಳು, ಶಿಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next