Advertisement

ಉಡುಪಿ: ಮಾಸ್ಕ್ ಧರಿಸದವರಿಗೆ ಕಡ್ಡಾಯ ಪರೀಕ್ಷೆ 

01:16 AM Aug 20, 2021 | Team Udayavani |

ಉಡುಪಿ:  ಕೋವಿಡ್‌ ಹರಡು ವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಇನ್ನು ಮುಂದೆ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್‌-19 ಪರೀಕ್ಷೆಗೆ ಒಳಪಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

Advertisement

ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಇನ್ನಿತರ ಕೋವಿಡ್‌-19 ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವವಂತೆ ಮಾಡಲು, ಇನ್ನು ಮುಂದೆ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್‌-19 ಪರೀಕ್ಷೆಗೆ ಒಳಪಡಿಸಲಾಗುವುದು. ಪ್ರತಿರೋಧ ಒಡುವವರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ಕ್ರಿಮಿನಲ್‌  ಪ್ರಕರಣ ದಾಖಲಿಸಲಾಗುವುದು  ಮತ್ತು  ಕಠಿನ ಕ್ರಮ  ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಎಚ್ಚರಿಸಿದ್ದಾರೆ.

ಪ್ರಾಥಮಿಕ ಸಂಪರ್ಕಿತರು :

ಜಿಲ್ಲೆಯಲ್ಲಿ ಕೋವಿಡ್‌19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಾಗೂ ಜಿಲ್ಲೆಯ ಜನರನ್ನು  ಕೋವಿಡ್‌ ನಿಂದ ರಕ್ಷಿಸುವ ಉದ್ದೇಶದಿಂದ ,ಇನ್ನು ಮುಂದೆ ಕಂಟೈನ್‌ಮೆಂಟ್‌ ವಲಯಗಳಲ್ಲಿ ವಾಸಿಸುವವರನ್ನು ಪ್ರಾಥಮಿಕ ಸಂಪರ್ಕಿತರು ಎಂದು ಪರಿಗಣಿಸಿ, ಅಂತಹ ಎಲ್ಲ ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next