Advertisement

ಎಲ್ಲ ಶಾಲೆಗಳಲ್ಲಿ ಕಡ್ಡಾಯ ಶೌಚಾಲಯಕ್ಕೆ ಆದೇಶ

02:08 AM Jul 16, 2019 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಅಕ್ಟೋಬರ್‌ರೊಳಗೆ ಕಡ್ಡಾಯವಾಗಿ ಶೌಚಾಲಯಗಳನ್ನು ಹೊಂದಲೇಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Advertisement

ನಾಲ್ಕು ಸಾವಿರ ಶಾಲೆಗಳಲ್ಲಿ “ಬಯಲೇ ಶೌಚ’ ಎಂಬ ಶೀರ್ಷಿಕೆಯಡಿ ಉದಯವಾಣಿ ವಿಸ್ತೃತ ವರದಿ ಪ್ರಕಟಿಸಿ, ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯ ಇಲ್ಲದೇ ಇರುವ ಬಗ್ಗೆ ಬೆಳಕು ಚೆಲ್ಲಿತ್ತು.

ಉದಯವಾಣಿ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಎಲ್ಲ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ನರೇಗಾ ಯೋಜನೆಯಡಿಯಲ್ಲಿ ಅಭಿಯಾನ ಕೈಗೊಂಡು ಅ.1ಕ್ಕೆ ಎಲ್ಲ ಸರಕಾರಿ ಶಾಲೆಗಳಲ್ಲೂ ಕಡ್ಡಾಯವಾಗಿ ಶೌಚಾಲಯ ಹೊಂದಿರಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

2018ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಸರಕಾರಿ (ಮತಗಟ್ಟೆಗಳೆಂದು ಗುರುತಿಸಿರುವ) ಶಾಲೆಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಲ್ಲಿ ಒಂದಾದ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಹಾಗೆಯೇ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಪಟ್ಟ ಶಾಲೆಗಳ ಮುಖ್ಯೋಪಾಧ್ಯಾಯರ ಖಾತೆಗೆ ಹಣ ಜಮಾ ಮಾಡುತ್ತಾರೆ. ಆದರೆ 4 ಸಾವಿರ ಶಾಲೆಗಳಲ್ಲಿ ಶೌಚಾಲಯ ಇಲ್ಲ ಎಂದಾದ ಮೇಲೆ ಬಳಕೆ ಆಗದೇ ಇರುವ ಅನುದಾನ ಸರಕಾರಕ್ಕೆ ವಾಪಸ್‌ ನೀಡಬೇಕಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ಉಪನಿರ್ದೇಶಕರು ಪ್ರತಿ ವಾರವೂ ಸಮೀಕ್ಷೆ ನಡೆಸಿ, ಪಟ್ಟಿ ಸಿದ್ಧಪಡಿಸಲು ಸೂಚಿಸಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next