Advertisement

ಮಂಡ್ಯ: ಕತ್ತುಕೊಯ್ದು ವಿಚ್ಛೇದಿತ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ

06:33 PM Jan 29, 2022 | Team Udayavani |

ಮಂಡ್ಯ: ಪತ್ನಿಯನ್ನೇ ಕತ್ತುಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಶಾಲಿನಿ(32 ) ಕೊಲೆಯಾದ ದುರ್ದೈವಿ ಮಹಿಳೆ. ಈಕೆಯ ಪತಿ ಸುರೇಶ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಒಂದೇ ಗ್ರಾಮದವರಾದ ಶಾಲಿನಿ ಹಾಗೂ ಸುರೇಶ್ ಕಳೆದ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಕೆಲವು ವರ್ಷ ಅನ್ಯೋನ್ಯವಾಗಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು.ನಂತರ ಹೊಂದಾಣಿಕೆ ಕೊರತೆಯಿಂದಾಗಿ 5  ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿಯೇ ಶಾಲಿನಿ ಜೀವನ ಸಾಗಿಸುತ್ತಿದ್ದಳು. ಇದರಿಂದ ಕುಪಿತಗೊಂಡ ಸುರೇಶ್ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಖಿನ್ನತೆ ಒಳಗಾಗಿದ್ದನು.

ಶನಿವಾರ ಪತ್ನಿ ಕೆಲಸದಿಂದ ಬರುವುದನ್ನೇ ಕಾದು ಕುಳಿತಿದ್ದ ಸುರೇಶ್, ಮನೆಗೆ ಬರುತ್ತಿದ್ದಂತೆ ಕತ್ತು ಕುಯ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next