Advertisement

Mandya: ಕಾಡಾನೆ ದಾಳಿಗೆ ಬಲಿಯಾದ ಕೂಲಿ ಕೆಲಸದ ಮಹಿಳೆ

09:45 AM Nov 19, 2023 | Team Udayavani |

ಮಂಡ್ಯ: ಕಾಡಾನೆಗಳ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಮಂಡ್ಯ ಜಿಲ್ಲೆಯ ಲಾಳನಕೆರೆ ಬಳಿ ರವಿವಾರ ಬೆಳಗ್ಗೆ ನಡೆದಿದೆ.

Advertisement

ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿರುವ ಲಾಳನಕೆರೆ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಸಾಕಮ್ಮ(50 ವ) ಎಂಬಾಕೆಯ ಮೇಲೆ ಆನೆ ದಾಳಿ ಮಾಡಿದೆ.

ಪಿಹಳ್ಳಿ ಗ್ರಾಮದವರೊಬ್ಬರ ಜಮೀನಿಗೆ ಸಾಕಮ್ಮ ಸೇರಿದಂತೆ ಎಂಟಕ್ಕೂ ಹೆಚ್ಚು ಮಂದಿ ಕೂಲಿ ಕೆಲಸಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ 8ರ ಸಮಯದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಸಾಕಮ್ಮ ಏಕಾಏಕಿ ಸಿಕ್ಕಿಹಾಕಿಕೊಂಡಿದ್ದಾರೆ. ಅದೃಷ್ಟವಶಾತ್ ಇತರ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆನೆಗಳ ಹಿಂಡು ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿದ್ದು, ಲಾಳನಕೆರೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಮಂಡ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next