Advertisement

Mandya: ಮೇಲುಕೋಟೆ ದಳವಾಯಿ ಕರೆ ಬಳಿ ನವಜಾತ ಶಿಶುವಿನ ಶವ ಪತ್ತೆ

05:59 PM Dec 12, 2023 | Team Udayavani |

ಮಂಡ್ಯ: ನವಜಾತ ಹೆಣ್ಣು ಶಿಶುವಿನ ಶವವೊಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ದಳವಾಯಿ ಕೆರೆಯ ಬಳಿ ಮಂಗಳವಾರ ಪತ್ತೆಯಾಗಿದೆ.

Advertisement

ದಳವಾಯಿ ಕರೆ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಎರಡು ದಿನದ ಹಿಂದೆ ಜನಿಸಿರುವ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ.

ಹೆಣ್ಣು ಎಂಬ ಕಾರಣಕ್ಕೆ ಶಿಶು ಎಸೆದೋಗಿರುವ ಶಂಕೆ ವ್ಯಕ್ತವಾಗಿದ್ದು ಈ ಪ್ರದೇಶದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ಶಿಶುವಿನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಮೇಲುಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next