Advertisement

ಕಬ್ಬಿನ ದರ ನಿಗದಿ ಆಗ್ರಹಿಸಿ ಮಂಡ್ಯ ಬಂದ್: ವ್ಯಾಪಕ ಬೆಂಬಲ, ಚಿತ್ರ ಪ್ರದರ್ಶನವೂ ರದ್ದು

01:24 PM Dec 19, 2022 | Team Udayavani |

ಮಂಡ್ಯ: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ನಗರ ಬಂದ್ ಆಚರಿಸಲಾಯಿತು.

Advertisement

ರೈತ ಸಂಘ ಕರೆ ನೀಡಿದ್ದ ಜಿಲ್ಲಾ ಕೇಂದ್ರ ಮಂಡ್ಯ ನಗರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು, ಪ್ರಮುಖ ವಾಣಿಜ್ಯ ಪ್ರದೇಶದಲ್ಲಿ ವರ್ತಕರು ಅಂಗಡಿ ಮುಂಗಟುಗಳನ್ನು ಬಾಗಿಲು ಮುಚ್ಚಿ ಬಂದ್ ಬೆಂಬಲಿಸಿದರು, ಪೇಟೆ ಬೀದಿ, ವಿ. ವಿ ರಸ್ತೆ, ಗುತ್ತಲು ರಸ್ತೆ, ಆರ್.ಪಿ ರಸ್ತೆ, ಡಾ.ಬಿ.ಆರ್ ಅಂಬೇಡ್ಕರ್ ರಸ್ತೆ (ನೂರಡಿ ರಸ್ತೆ),  ಬನ್ನೂರು ರಸ್ತೆ, ಹೊಸಳ್ಳಿ ರಸ್ತೆ, ವಿನೋಬಾ ರಸ್ತೆ ಹಾಗೂ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಹುತೇಕ ಅಂಗಡಿಗಳು ಬಾಗಿಲು ಮುಚ್ಚಿದ್ದವು. ಬೆಳಂ ಬೆಳಗ್ಗೆ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಪ್ರತಿಭಟನಾಕಾರರು ಬಾಗಿಲು ಮುಚ್ಚಿಸಿದರು, ಇದರಿಂದ ಹೋಟೆಲ್ ವ್ಯಾಪಾರಕ್ಕೆ ಅಡೆತಡೆ ಉಂಟಾಯಿತು.

ಚಿತ್ರ ಪ್ರದರ್ಶನ ರದ್ದು: ಚಲನಚಿತ್ರ ಮಂದಿರಗಳಲ್ಲಿ ಬೆಳಗಿನ ಪ್ರದರ್ಶನ ರದ್ದು ಮಾಡಲಾಗಿತ್ತು, ಹೆದ್ದಾರಿಯಲ್ಲಿನ ಪೆಟ್ರೋಲ್ ಬಂಕ್ ಗಳು ಕೆಲ ತಾಸು ವ್ಯಾಪಾರ ಸ್ಥಗಿತ ಮಾಡಿದ್ದವು. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಸರ್ಕಾರಿ ಬಸ್ ಗಳ ಸಂಚಾರದಲ್ಲಿ ವ್ಯತಯ ಉಂಟಾಗಿತ್ತು.  ಹೆದ್ದಾರಿಯಲ್ಲಿ ಸಂಚರಿಸುವ ಸರ್ಕಾರಿ ಬಸ್ ಗಳು ಕೆಎಸ್ಆರ್ ಟಿಸಿ ನಿಲ್ದಾಣಕ್ಕೆ ಬಾರದ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರಿಗೆ ತೆರಳುವ ಪ್ರಯಾಣಿಕರು ಬಸ್ ಸಿಗದೆ ಪರದಾಡಿದರು. ರೈತರು ಹೆದ್ದಾರಿ ತಡೆದಿದ್ದರಿಂದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು.

ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ರೈತರ ಹೋರಾಟ ಬೆಂಬಲಿಸಿದರು. ಕೇಂದ್ರ- ರಾಜ್ಯಸರ್ಕಾರಿ ಕಚೇರಿ. ಬ್ಯಾಂಕ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು, ಬಂದ್ ಹಿನ್ನಲೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದರಿಂದ ಮಕ್ಕಳು ನಿಗದಿತ ಸಮಯಕ್ಕೆ ಶಾಲೆ ತಲುಪಲು ಸಾಧ್ಯವಾಗಲಿಲ್ಲ. ಇನ್ನುಳಿದಂತೆ ಶಾಲೆಗಳಲ್ಲಿ ಪಾಠ ಪ್ರವಚನಕ್ಕೆ ತೊಂದರೆಯಾಗಲಿಲ್ಲ.

Advertisement

ಇದನ್ನೂ ಓದಿ:ಪಂದ್ಯ ಸೋತರೂ ವಿಶ್ವದ ಹೃದಯ ಗೆದ್ದ ಕಿಲಿಯನ್ ಎಂಬಪ್ಪೆ ಎಂಬ ಮೋಡಿಗಾರ

ರೈತರ ಸಂಘದ ಜೊತೆ ದನಿಗೂಡಿಸಿದ ದಲಿತ. ಪ್ರಗತಿಪರ, ಕನ್ನಡಪರ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next