Advertisement

Mandya; ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಮೃತ್ಯು, ನಾಲ್ವರಿಗೆ ಗಾಯ

11:40 PM Mar 04, 2024 | Vishnudas Patil |

ಮಂಡ್ಯ: ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ವಾಸುವಳ್ಳಿ ಗ್ರಾಮದ ಬಳಿ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಬೆಂಗಳೂರಿನ ಗೋವಿಂದರಾಜ ನಗರದ ಹೇಮಂತ್ ಯಾದವ್ (17) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಗಾಯಗೊಂಡಿದ್ದ ದರ್ಶನ್(21) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

Advertisement

ಬೆಂಗಳೂರಿನಿಂದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಸಿದ್ದಪ್ಪಾಜಿ ದೇವಸ್ಥಾನಕ್ಕೆ ಸ್ನೇಹಿತರಾದ ಮಹದೇವ್, ಶ್ರೀನಿವಾಸ (ಚಾಲಕ), ಹೇಮಂತ್ ಯಾದವ್, ದರ್ಶನ್, ತೇಜಸ್, ಅಭಿಷೇಕ್, ಉಮೇಶ್ ತೆರಳಿ ವಾಪಾಸ್ ಬೆಂಗಳೂರಿಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಕೈ, ಕಾಲು, ಮುಖಕ್ಕೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುತ್ತೇವೆ.

ಘಟನೆಯಲ್ಲಿ ಕಾರಿನಲ್ಲಿದ್ದ ತೇಜಸ್, ಮಹದೇವ್, ಶ್ರೀನಿವಾಸ್, ಮತ್ತು ಅಭಿಷೇಕ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next