Advertisement
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಕಾವೇರಿ ಉದ್ಯಾನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಧರಣಿ ಕುಳಿತು ಕೇಂದ್ರ ಹಾಗೂ ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
Related Articles
Advertisement
ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಚುನಾವಣೆ ಸಂದರ್ಭಗಳಲ್ಲೇ ನಮ್ಮ ನಾಯಕರ ಮೇಲೆ ದಾಳಿ ನಡೆಸುವ ಮೂಲಕ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಚುನಾವಣೆಗಳಲ್ಲಿ ಗೆಲ್ಲಲಾಗದೆ ಈ ರೀತಿಯ ಹಿಂಬಾಗಿಲ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಜನರೇ ತಕ್ಕಪಾಠ ಕಲಿಸಲಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಇಂಥ ಕೀಳು ಮಟ್ಟದ ರಾಜಕಾರಣ ಬಿಡಬೇಕು ಎಂದು ಆಗ್ರಹಿಸಿದರು.
ಆರೋಪಿಗಳ ಗಲ್ಲಿಗೇರಿಸಲು ಆಗ್ರಹ : ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿ ಅಮಾನುಷವಾಗಿ ಹತ್ಯೆಗೈದಿರುವ ಆರೋಪಿಗಳನ್ನು ಗಲ್ಲಿಗೇರಿಸುವ ಮೂಲಕ ಕಠಿಣ ಕಾನೂನನ್ನು ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಉತ್ತರ ಪ್ರದೇಶದ ಉನ್ನವ್, ಕತುವಾ ಮತ್ತು ಹತ್ರಾಸ್‌ನಲ್ಲಿ ನಡೆದಿರುವ ಸರಣಿ ಅತ್ಯಾಚಾರಗಳನ್ನು ತಡೆಗಟ್ಟುವಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಪರಾಧಗಳನ್ನು ಪೋಷಿಸುವ ಹಾಗೂ ರಕ್ಷಿಸುವ ಕೆಲಸವನ್ನು ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಮಾಡುತ್ತಿದ್ದು, ಕೂಡಲೇ ರಾಷ್ಟಪತಿಗಳು ಮಧ್ಯ ಪ್ರವೇಶಿಸಿ ಉತ್ತರ ಪ್ರದೇಶದ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಬೆಳೆಹಾನಿ ಪರಿಹಾರ ನೀಡಲು ಒತ್ತಾಯಿಸಿ ಪ್ರತಿಭಟನೆ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಖಂಡರಾದ ಎಚ್.ಕೆ.ರುದ್ರಪ್ಪ, ಎಂ.ಎಸ್.ಚಿದಂಬರ್, ಸುದರ್ಶನ್, ಸಿದ್ದರಾಮೇಗೌಡ, ಎಂ.ಡಿ.ಜಯರಾಂ, ಸಿ.ಎಂ.ದ್ಯಾವಪ್ಪ, ಹಾಲಹಳ್ಳಿ ಅಶೋಕ್, ಅಂಜನಾ ಶ್ರೀಕಾಂತ್, ನಾಗಮಣಿ, ಅನಿಲ್, ಶ್ರೀಧರ್, ರಶ್ಮಿ, ಪಲ್ಲವಿ, ವೀಣಾ, ಯಶೋಧ, ವಿಜಯಲಕ್ಷ್ಮಿ, ರಘುನಂದನ್, ಶುಭದಾಯಿನಿ, ಬಿ.ಪಿ.ಪ್ರಕಾಶ್, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.