ಮಂಡ್ಯ: ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಕೈಗೊಂಡಿದ್ದ ಜಿಲ್ಲೆಯ 30 ಮಹಿಳೆಯರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ಕಳೆದ ವಾರ ಶ್ರೀರಂಗಪಟ್ಟಣದ ವಿವಿಧ ಗ್ರಾಮಗಳಿಂದ ಆರು ಬಸ್ ಗಳಲ್ಲಿ ಮಹಿಳಾ ಭಕ್ತರು ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ತೆರಳಿದ್ದರು. ಈಗಾಗಲೇ ನಾಲ್ಕು ಬಸ್ ಗಳು ವಾಪಸಾಗಿದ್ದು, ಬಂದವರಲ್ಲಿ 30ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಸೋಂಕು ಪಾಸಿಟಿವ್ ದೃಢವಾಗಿದೆ.
ಮಂಡ್ಯ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, 30 ಮಂದಿಯ ಮಾದರಿ ಸಂಗ್ರಹಿಸಿ ಒಮಿಕ್ರಾನ್ ಟೆಸ್ಟ್ ಗೆ ಕಳುಹಿಸಲಾಗಿದೆ. ಸೋಂಕಿತರಿಗೆ ಹೋಂ ಐಸೋಲೇಷನ್ ನೀಡದೆ ಶ್ರೀರಂಗಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:ಸಮಾಜವಾದಿ ಪಕ್ಷ ಸರ್ಕಾರ ರಚಿಸಲಿದೆ-ಶ್ರೀಕೃಷ್ಣ ಕನಸಿನಲ್ಲಿ ಬಂದು ಹೇಳಿದ್ದಾನೆ: ಅಖಿಲೇಶ್
ಇಂದು ಮತ್ತೆರಡು ಬಸ್ ಶ್ರೀರಂಗಪಟ್ಟಣಕ್ಕೆ ವಾಪಸಾಗುವ ಸಾಧ್ಯತೆಯಿದ್ದು, ವಾಪಸ್ಸಾದವರಿಗೆ ಕಡ್ಡಾಯ ಕೋವಿಡ್ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೂ ಪರೀಕ್ಷೆ ನಡೆಸಲಾಗುತ್ತಿದೆ.