Advertisement

ಕುಂಭಮೇಳ ಅಚ್ಚುಕಟ್ಟಾಗಿ ನಿರ್ವಹಿಸಿ: ಡೀಸಿ

04:42 PM Oct 04, 2022 | Team Udayavani |

ಮಂಡ್ಯ: ಕೆ.ಆರ್‌.ಪೇಟೆ ತಾಲೂಕಿನ ಅಂಬಿಗರಹಳ್ಳಿ- ಸಂಗಾಪುರ-ಪುರದ ತ್ರಿವೇಣಿ ಸಂಗಮದಲ್ಲಿ ಅ.13 ರಿಂದ 16ರವರೆಗೆ ಕುಂಭಮೇಳ ನಡೆಯಲಿದ್ದು, ಯಾವುದೇ ಕೊರತೆಯಾಗದಂತೆ ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್‌.ಅಶ್ವತಿ ಸೂಚನೆ ನೀಡಿದರು.

Advertisement

ಕೆ.ಆರ್‌.ಪೇಟೆ ತಾಲೂಕಿನ ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಿತಿ ರಚನೆ ಸದಸ್ಯ ರೊಂದಿಗೆ ಸಭೆ ನಡೆಸಿ ಮಾತನಾಡಿದರು.

ಲೋಪಕ್ಕೆ ಆಸ್ಪದ ಬೇಡ: ಅ.6ರಂದು ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ 3 ಜ್ಯೋತಿರಥಕ್ಕೆ ಚಾಲನೆ ನೀಡಲಾಗುವುದು. ಜ್ಯೋತಿರಥಗಳು ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಅ.13ರಂದು ಕೆ.ಆರ್‌.ಪೇಟೆಗೆ ತಲುಪಲಿದೆ. ಕೆ.ಆರ್‌.ಪೇಟೆ ತಾಲೂಕಿನಲ್ಲಿ ಜ್ಯೋತಿ ಮೆರವಣಿಗೆ ನಡೆಯಲಿದೆ. ನಂತರ ಅಂಬಿಗರಹಳ್ಳಿ ತ್ರಿವೇಣಿ ಸಂಗಮಕ್ಕೆ ಜ್ಯೋತಿರಥ ತಲುಪಲಿದೆ. ಕುಂಭ ಮೇಳ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿ ಸಲು ವಿವಿಧ ಸಮಿತಿ ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಯಾವುದೇ ಲೋಪಕ್ಕೆ ಆಸ್ಪದ ನೀಡದೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಆಹಾರ ಸಮಿತಿ: ಲಕ್ಷಾಂತರ ಭಕ್ತಾದಿ ಗಳು ಕುಂಭ ಮೇಳಕ್ಕೆ ಆಗಮಿಸಲಿದ್ದಾರೆ. ಭಕ್ತಾ ದಿಗಳಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯಾಗಬೇಕು. ಈಗಾಗಲೇ ಹಲವಾರು ದಾನಿ ಗಳು ಅಕ್ಕಿ, ಬೇಳೆ, ಎಣ್ಣೆ ಇನ್ನಿತರ ಆಹಾರ ಪದಾರ್ಥ ಗಳನ್ನು ನೀಡುತ್ತಿದ್ದು, ಅವುಗಳನ್ನು ಸೂಕ್ತವಾಗಿ ಸಂಗ್ರಹಿಸಿಕೊಳ್ಳಬೇಕು. ಇನ್ನುಳಿದಂತೆ ಬೇಕಿರುವ ಆಹಾರ ಪದಾರ್ಥಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಭಕ್ತಾದಿ ಗಳಿಗೆ ಆಹಾರ ವಿತರಿಸಲು ಬೇಕಿರುವ ಸಂಖ್ಯೆ ಯಲ್ಲಿ ಕೌಂಟರ್‌ಗಳನ್ನು ತೆರೆಯಿರಿ ಎಂದು ಸೂಚನೆ ನೀಡಿದರು.

ಮೂಲ ಸೌಕರ್ಯ ಕಲ್ಪಿಸಿ: ರಸ್ತೆ, ಶೌಚಾಲಯ, ವಾಹನ ನಿಲ್ದಾಣ, ಕುಡಿಯುವ ನೀರು, ಊಟೋಪ ಚಾರ, ನೈರ್ಮಲ್ಯ, ತಂಗುದಾಣ, ವೈದ್ಯಕೀಯ ಸೇವೆಗಳು ಮತ್ತು ತುರ್ತು ಚಿಕಿತ್ಸೆ, ಅಗ್ನಿಶಾಮಕದಳ, ಹೆಲಿಪ್ಯಾಡ್‌, ರಕ್ಷಣಾ ಕಾರ್ಯಗಳ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

Advertisement

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್‌. ಎಲ್‌.ನಾಗರಾಜು, ಉಪವಿಭಾಗಾ ಧಿಕಾರಿ ಬಿ.ಸಿ. ಶಿವಾ ನಂದಮೂರ್ತಿ, ತಹಶೀಲ್ದಾರ್‌ಗಳಾದ ಕುಂಞ ಅಹಮದ್‌, ಎಂ.ವಿ.ರೂಪಾ, ನಯನಾ, ನರಸಿಂಹ ಮೂರ್ತಿ, ನಂದೀಶ್‌, ಜಿಲ್ಲಾ ಯೋಜನಾಧಿ ಕಾರಿ ತುಷಾರಮಣಿ, ಜಿಲ್ಲಾ ವಾರ್ತಾಧಿ ಕಾರಿ ಎಸ್‌.ಎಚ್‌. ನಿರ್ಮಲಾ, ಕುಂಭಮೇಳ ಕಾರ್ಯಕ್ರಮ ಸಂಯೋ ಜಕ ರಂಗನಾಥ್‌ ಸೇರಿದಂತೆ ವಿವಿಧ ಇಲಾಖೆಯ ಅ ಧಿ ಕಾರಿಗಳು ಉಪಸ್ಥಿತರಿದ್ದರು.

ಸ್ವಚ್ಛತಾ ಸಮಿತಿ ರಚಿಸಿ : ತ್ರಿವೇಣಿ ಸಂಗಮದಲ್ಲಿ ನಡೆಯುವ ನಾಲ್ಕು ದಿನಗಳ ಕುಂಭಮೇಳದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಲಿದ್ದು, ಮಂಡ್ಯ ಜಿಲ್ಲೆಯ ಜನರ ಜತೆಗೆ ಬೇರೆ ಬೇರೆ ಜಿಲ್ಲೆಗಳಿಂದ ಜನ ಹೆಚ್ಚಿನ ಸಂಖ್ಯೆಯಲ್ಲಿ ಕುಂಭಮೇಳಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ಕುಂಭಮೇಳ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತಾ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಎಸ್‌. ಅಶ್ವತಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next