Advertisement

ಶೀಳನೆರೆ ಗ್ರಾಮದಲಿ ಡಿಸಿ ವಾಸ್ತವ್ಯಕ್ಕೆ ಸಿದ್ದತೆ

04:44 PM Feb 18, 2021 | Team Udayavani |

ಮಂಡ್ಯ: ಕೆ.ಆರ್‌.ಪೇಟೆ ತಾಲೂಕಿನ ಶೀಳನೆರೆ ಗ್ರಾಮದಲ್ಲಿ ಫೆ.20ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಹೂಡಲಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳು ನಡೆಯುತ್ತಿವೆ.

Advertisement

ಗ್ರಾಮದ ವೃದ್ಧರು, ಮಹಿಳೆಯರು, ಅಂಗವಿಕಲರು, ವಿಧವಾ ವೇತನ ಫಲಾನುಭವಿಗಳು ಪ್ರತಿ ತಿಂಗಳು ಮಾಶಾಸನ ಪಡೆಯಲು ತಾಲೂಕುಹಾಗೂ ಜಿಲ್ಲಾ ಕೇಂದ್ರಕ್ಕೆ ಅಲೆದಾಡಬೇಕಾಗಿತ್ತು. ಆದರೆ, ಸರ್ಕಾರದ ನಿರ್ಧಾರದಿಂದಾಗಿ ಜಿಲ್ಲಾಡಳಿತವೇ ಗ್ರಾಮಕ್ಕೆ ಬರುವಂತಾಗಿದೆ.

ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹಿಂದುಳಿದ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಜಿಲ್ಲಾಧಿಕಾರಿ, ತಹಶೀಲ್ದಾರ್‌ಗಳು ಗ್ರಾಮ ವಾಸ್ತವ್ಯ ಹೂಡುವ ಮೂಲಕ ಗ್ರಾಮದಲ್ಲಿನ ಸಮಸ್ಯೆಗಳನ್ನು ಬಗೆ ಹರಿಸಬೇಕು. ಗ್ರಾಮ ಸ್ಥರಿಗೆ ಸಿಗಬೇಕಾದ ಸೌಲ ಭ್ಯಗಳನ್ನು ಸ್ಥಳ ದಲ್ಲಿಯೇ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.

ಗ್ರಾಮದಲ್ಲಿ ಬೀಡುಬಿಟ್ಟಿರುವ ಅಧಿ ಕಾರಿಗಳು: ಈಗಾಗಲೇ ಕಳೆದ 15 ದಿನಗಳಿಂದ ತಾಲೂಕು ಆಡಳಿತವೇ  ಗ್ರಾಮ ದಲ್ಲಿದ್ದು, ಗ್ರಾಮಗಳ ಜನರ ಸಮಸ್ಯೆಗಳಿಗೆ ಸ್ಪಂದಿ ಸುತ್ತಿದೆ. ತಾಲೂಕಿನ ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಪ್ರತಿನಿತ್ಯ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿ ಸುವ ನಿಟ್ಟಿನಲ್ಲಿ ಕಾರ್ಯೋ ನ್ಮುಖರಾಗಿ ದ್ದಾರೆ.

ಸಮಸ್ಯೆ ಆಲಿಸುತ್ತಿರುವ ಅಧಿಕಾರಿಗಳು: ಗ್ರಾಮಕ್ಕೆ ಪ್ರತಿ ನಿತ್ಯ ಭೇಟಿ ನೀಡು ತ್ತಿರುವ ಅಧಿಕಾರಿಗಳು ಗ್ರಾಮದ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಗ್ರಾಮಸ್ಥರು ಯಾ ವುದೇ ಸಮಸ್ಯೆ ಬಗ್ಗೆ ಮನವಿ ಆಲಿಸಿ, ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿÓಲಾ ‌ ಗುತ್ತಿದೆ. ಸಮರ್ಪಕ ಮಾಶಾಸನ ವಿತರಣೆ: ಗ್ರಾಮದಲ್ಲಿರುವ ವೃದ್ಧರು, ಅಂಗವಿಕಲರು, ವಿಧವಾ ವೇತನ, ಮಾಶಾಸನ ಸೇರಿದಂತೆ ವಿವಿಧ ವೇತನಗಳನ್ನು ಸ್ಥಳದಲ್ಲಿಯೇ ನೀಡಲಾಗುತ್ತಿದೆ. ಇದುವರೆಗೂ ಸರಿಯಾಗಿ ವಿತರಣೆಯಾಗದಿದ್ದ ಫಲಾನುಭವಿಗಳಿಗೆ ಸಮರ್ಪಕವಾಗಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಅಲ್ಲದೆ, ಹೊಸ ಫಲಾನುಭವಿಗಳಿಗೆ ಅನುಮತಿ ಪತ್ರಗಳನ್ನು ವಿತರಿಸಲಾಗುತ್ತಿದೆ.

Advertisement

ಇದರ ಜತೆಗೆ ಆಧಾರ್‌ ತಿದ್ದುಪಡಿ, ಪೌತಿಖಾತೆ, ಆರ್‌ಟಿಸಿ ತಿದ್ದುಪಡಿ, ಸ್ಮಾರ್ಟ್‌ ಕಾರ್ಡ್‌ ವಿತರಣೆ, ಹೆಲ್ತ್‌ ಕಾರ್ಡ್‌ ವಿತರಣೆ ಮಾಡಲಾಗುತ್ತಿದೆ. ಮೂಲ ಸೌಕರ್ಯಕ್ಕೆ ಆದ್ಯತೆ: ಗ್ರಾಮದಲ್ಲಿ 3913 ಜನಸಂಖ್ಯೆ ಇದೆ. ಅತಿ ಹೆಚ್ಚು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಗ್ರಾಪಂ ಹಾಗೂ ತಾಲೂಕು ಆಡಳಿತ ಆಗಬೇಕಾಗಿರುವ ಮೂಲ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈಗಾಗಲೇ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ವಿದ್ಯುತ್‌, ಕಾಂಕ್ರೀಟ್‌ ರಸ್ತೆ, ಚರಂಡಿಗಳ ನಿರ್ಮಾಣ ಮಾಡಲಾಗಿದೆ. ಪಶು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಕೆರೆ ಹೂಳೆತ್ತುವುದು, ಕೃಷಿ ಹೊಂಡ ನಿರ್ಮಾಣ ಸೇರಿದಂತೆ ನರೇಗಾ ಯೋಜನೆ ಸಮರ್ಪಕವಾಗಿ ಜಾರಿ ಮಾಡಲಾಗುತ್ತಿದೆ. ಆದರೂ, ಇನ್ನೂ ಅಭಿವೃದ್ಧಿ ಕೆಲಸಗಳು ಬಾಕಿ ಇವೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣ, ಸಮುದಾಯ ಶೌಚಾಲಯ ನಿರ್ಮಾಣ ಅಗತ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next