Advertisement

ಮಂಡ್ಯ ರೆಬೆಲ್ಸ್‌ ವಿರುದ್ಧ ಕ್ರಮಕ್ಕೆ ಆಗ್ರಹ

11:07 PM May 03, 2019 | Lakshmi GovindaRaj |

ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷದ್ರೋಹ, ಶಿಸ್ತು ಉಲ್ಲಂಘನೆ, ಮೈತ್ರಿ ವಿರೋಧಿ ಚಟುವಟಿಕೆ ನಡೆಸಿ, ಪಕ್ಷಕ್ಕೆ ಕಳಂಕ ತರುವ ನಡವಳಿಕೆ ತೋರಿರುವ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಅಗೌರವ ತೋರಿರುವ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

Advertisement

ಮಂಡ್ಯದಲ್ಲಿ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ, ಕೆ.ಬಿ.ಚಂದ್ರಶೇಖರ್‌, ಗಣಿಗ ರವಿ, ಅವರು ಮೈತ್ರಿ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ಪರ ಕೆಲಸ ಮಾಡದೆ ಪಕ್ಷದ ಆದೇಶ ಉಲ್ಲಂಘಿಸಿದ್ದಾರೆ.

ರಾಹುಲ್‌ಗಾಂಧಿ ಸಮಾವೇಶ ನಡೆಸಿದಾಗಲೂ ಗೈರು ಹಾಜರಾಗಿದ್ದಾರೆ. ಹೀಗಾಗಿ, ಅವರು ಪಕ್ಷದಲ್ಲಿ ಇರಲು ನೈತಿಕತೆ ಇಲ್ಲ, ಅವರೇ ರಾಜೀನಾಮೆ ನೀಡಬೇಕು. ಇಲ್ಲವೇ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next