ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ,ಮಲೇರಿಯಂತಹ ರೋಗಗಳ ನಿಯಂತ್ರಣದ ಬಗ್ಗೆ ಗ್ರಾಮೀಣ ಭಾಗದ ಜನರ ಮನೆ ಮನೆಗೆ ಭೇಟಿ ನೀಡಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಡೆಂಘೀ
ಪ್ರಕರಣಗಳು ಕಂಡು ಬರುವುದರಿಂದ ಮುನ್ನೆಚ್ಚರಿಕೆ
ಕ್ರಮವಾಗಿ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಶಾಲಾ ಮಕ್ಕಳಿಗೆ ವರ್ಷದ ಒಂದು ದಿನ ಆರೋಗ್ಯ ತಪಾಸಣೆ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಹೆಚ್ಚು ಮಳೆ: ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಏಪ್ರಿಲ… ತಿಂಗಳಿಂದ ಈವರೆಗೆ ಹೆಚ್ಚು ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿರುವುದರಿಂದ ಹಿಂಗಾ ರು ಬೆಳೆ ಬೆಳೆಯಲು ಅನುಕೂಲವಾದ ವಾತಾವರಣವಿರುತ್ತದೆ. ಜಿಲ್ಲೆಯಲ್ಲಿ ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಮೇವಿನ ಸಮಸ್ಯೆ ಇಲ್ಲ: ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಇರುವುದಿಲ್ಲ. ಜಿಲ್ಲೆಯಲ್ಲಿ ಮಳೆ ಚೆನ್ನಾಗಿರುವುದರಿಂದ ಕೆರೆ ಕಟ್ಟೆಗಳು ತುಂಬಿರುವುದರಿಂದ ಮೀನುಗಾರಿಕೆ ಇಲಾಖೆಯಿಂದ ಕೆರೆಗಳಿಗೆ ಮೀನು ಮರಿ ಬಿಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಮಸ್ಯೆಗಳು ಬಗೆಹರಿಸಿ: ಇಲಾಖೆಗಳಲ್ಲಿನ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾಧನೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ಸಾರ್ವಜನಿಕರಿಗೆ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸುವ ನಿಟ್ಟಿನಲ್ಲಿ ಖುದ್ದಾಗಿ ಸ್ಥಳಕ್ಕೆ ಭೇಟಿ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಸಕಾಲದಲ್ಲಿ ವೇತನ ಕೊಡಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ತಿಂಗಳ ವೇತನವನ್ನು ವಿಳಂಬ ಮಾಡದೇ ವೇತನ ಪಾವತಿಯನ್ನು ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಸಭೈಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಧಿಕಾರಿ ಡಾ.ಎಂ.ವಿ.ವೆಂಕಟೇಶ್,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಯಾಲಕ್ಕಿಗೌಡ, ಅಪರ ಜಿಲ್ಲಾಧಿಕಾರಿಗಳಾದ ಟಿ.ಯೊಗೇಶ್, ಮಂಡ್ಯ ಉಪವಿಭಾಗಾಧಿ ಕಾರಿ ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.