Advertisement

Mandya ಯಾರಿಗೆ?: ನಡ್ಡಾ, ಸಂತೋಷ್ ಭೇಟಿಯಾಗಿ ಮಾತುಕತೆ ನಡೆಸಿದ ಸುಮಲತಾ

04:40 PM Feb 08, 2024 | Team Udayavani |

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಕಳೆದ ಬಾರಿ ದೇಶದಲ್ಲೇ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಿದ್ದ ಮಂಡ್ಯ ಕ್ಷೇತ್ರದ ಕುರಿತು ಈ ಬಾರಿಯೂ ಹಲವು ಪ್ರಶ್ನೆಗಳು ಎದ್ದಿದ್ದು ರಾಜಕೀಯ ವಿದ್ಯಮಾನಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಮೂಡಿಸುತ್ತಿವೆ.

Advertisement

ಪಕ್ಷೇತರವಾಗಿ ಗೆದ್ದಿದ್ದ, ಬಿಜೆಪಿಗೆ ಬೆಂಬಲ ಸೂಚಿಸಿರುವ ಸಂಸದೆ ಸುಮಲತಾ ಅವರು ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

”ಜೆ.ಪಿ ನಡ್ಡಾ  ಹಾಗೂ ಬಿ.ಎಲ್‌. ಸಂತೋಷ್‌ ಅವರನ್ನು ಅನೌಪಚಾರಿಕವಾಗಿ ಇಂದು ಭೇಟಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಲಾಯಿತು.ತಮ್ಮ ಅಮೂಲ್ಯ ಸಮಯವನ್ನು ನೀಡಿ, ನನ್ನ ಮಾತುಗಳನ್ನು ಆಲಿಸಿದ ನಡ್ಡಾ ಜಿ ಅವರಿಗೂ ಸಂತೋಷ್ ಜಿ ಅವರಿಗೂ ಧನ್ಯವಾದಗಳು. ತಮ್ಮ ಸಹಕಾರದ ಮಾತುಗಳಿಗೆ ಮತ್ತೊಮ್ಮೆ ಧನ್ಯವಾದಗಳು” ಎಂದು ಸುಮಲತಾ ಎಕ್ಸ್ ಪೋಸ್ಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವ ಕಾರಣ ಹಳೇ ಮೈಸೂರು ಭಾಗದ ಪಕ್ಷದ ಹಿಡಿತವಿರುವ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಬಿಟ್ಟು ಕೊಡುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗಿರುವ ಬೆನ್ನಲ್ಲೇ ಭೇಟಿ ನಡೆದಿದೆ.

Advertisement

ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಅವರು ಇನ್ನಷ್ಟೇ ಅಂತಿಮ ನಿರ್ಧಾರಕ್ಕೆ ಬರಬೇಕಿದೆ.

ಸುಮಲತಾ ಅವರು ಸಂಸದೆಯಾಗಿ ನಾನು ಬಿಜೆಪಿಗೆ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲ ನೀಡಿದ್ದೆ, ನನಗೆ ಮಂಡ್ಯ ಕ್ಷೇತ್ರದ ಮೊದಲ ಬಿಜೆಪಿ ಸಂಸದೆಯಾಗಬೇಕೆಂಬ ಆಸೆಯಿದೆ ಎಂದು ಬಹಿರಂಗವಾಗಿ ಬಿಜೆಪಿ ಟೆಕೆಟ್ ಗೆ ಬೇಡಿಕೆ ಇಟ್ಟಿದ್ದಾರೆ. ಇನ್ನೊಂದೆಡೆ ಬಿಜೆಪಿಯ ಕೆಲ ಮುಖಂಡರು ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next