Advertisement

ಮಂಡ್ಯ: ಪಕ್ಷೇತರರಾಗಿ 5 ರೂ. ಡಾಕ್ಟರ್‌ ಕಣಕ್ಕೆ

06:25 AM Apr 23, 2018 | |

ಮಂಡ್ಯ: ಐದು ರೂ. ಡಾಕ್ಟರ್‌ ಎಂದೇ ಪ್ರಸಿದ್ಧರಾಗಿರುವ ಡಾ.ಎಸ್‌.ಸಿ. ಶಂಕರೇಗೌಡರು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

Advertisement

ಸೋಮವಾರ (ಎ.23) ಬೆಳಗ್ಗೆ 11ಕ್ಕೆ ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಜೆಡಿಎಸ್‌ನಿಂದ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಡಾ.ಎಸ್‌.ಸಿ.ಶಂಕರೇಗೌಡರಿಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರಿ ವಿಧಾನಸಭಾ ಕಣಕ್ಕಿಳಿಯಲು ತೀರ್ಮಾನಿಸಿದ್ದರು. ಅಲ್ಲಿಯೂ ಬಿ ಫಾರಂ ಸಿಗದಿದ್ದರಿಂದ ಅಂತಿಮವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

ಸೇವೆ ಮೂಲಕವೇ ಅಪಾರ ಜನಪ್ರಿಯತೆ ಗಳಿಸಿದ್ದ ಡಾ| ಶಂಕರೇಗೌಡರು 2011ರಲ್ಲಿ ನಡೆದ ಜಿಪಂ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ದುದ್ದ ಜಿಪಂ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಜಿಪಂ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಪ್ರಸಕ್ತ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಸಿದರು. ಬಿಜೆಪಿ ಸೇರುವಂತೆ ಮೊದಲು ಶಂಕರೇಗೌಡರಿಗೆ ಆಹ್ವಾನ ಬಂದಿದ್ದರೂ ಜೆಡಿಎಸ್‌ ಟಿಕೆಟ್‌ ಸಿಗುವ ವಿಶ್ವಾಸದಲ್ಲಿ ಕೊನೆಯವರೆಗೂ ಕಾದುನೋಡುವ ತಂತ್ರ ಅನುಸರಿಸಿದ್ದರು. ಅಂತಿಮವಾಗಿ ಜೆಡಿಎಸ್‌ ಟಿಕೆಟ್‌ ಮಾಜಿ ಶಾಸಕ ಎಂ.ಶ್ರೀನಿವಾಸ್‌ರ ಪಾಲಾಯಿತು. ಆ ವೇಳೆಗೆ ಬಿಜೆಪಿ ಸೇರಿದ್ದ ಎನ್‌.ತಮ್ಮಣ್ಣ ಬಿಜೆಪಿ ಟಿಕೆಟ್‌ ಗಿಟ್ಟಿಸಿ ಕೊಳ್ಳುವಲ್ಲಿ ಯಶಸ್ವಿಯಾದರು. ಎರಡೂ ಪಕ್ಷಗಳಿಂದ ಟಿಕೆಟ್‌ ವಂಚಿತ ರಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next