Advertisement
ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ವರಿಷ್ಠರ ಸೂಚನೆಯಂತೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ವರಿಷ್ಠರು ಕೆಲವು ಆಕಾಂಕ್ಷಿಗಳಿಗೆ ಭರವಸೆ ನೀಡಿದ್ದು, ಅದರಂತೆ ಕ್ಷೇತ್ರದಲ್ಲಿ ನಿರಂತರವಾಗಿ ಸಾಮಾಜಿಕ ಚಟು ವಟಿಕೆಗಳಲ್ಲಿ ತೊಡಗಿ ಮತದಾರರಿಗೆ ಹತ್ತಿರವಾಗುವ ಪ್ರಯತ್ನದಲ್ಲಿದ್ದಾರೆ.
Related Articles
Advertisement
ಅದ್ದೂರಿ ಹುಟ್ಟುಹಬ್ಬಗಳಿಂದ ದೂರವಿದ್ದ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಈ ಬಾರಿ ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡು ಟಿಕೆಟ್ ಆಕಾಂಕ್ಷಿ ಎಂಬ ಸಂದೇಶ ರವಾನಿಸಿದ್ದಾರೆ. ಇತ್ತ ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಕ್ಷೇತ್ರ ಸುತ್ತು ತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಕೀಲಾರ ರಾಧಾಕೃಷ್ಣ ತನ್ನದೇ ಆದ ಸ್ವಯಂ ಸೇವಕರ ಪಡೆ ಕಟ್ಟಿ ಜನರ ಬಳಿಗೆ ಹೋಗಲು ಸಜ್ಜಾಗುತ್ತಿದ್ದಾರೆ.
ಕಳೆದ ಬಾರಿಯೂ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟ್ಟು : ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆಯೂ ಕಗ್ಗಂಟಾಗಿತ್ತು. ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದರಿಂದ ಅಳೆದು ತೂಗಿ ಶಾಸಕ ಎಂ.ಶ್ರೀನಿವಾಸ್‌ರಿಗೆ ಮಣೆ ಹಾಕಲಾಗಿತ್ತು. ಆಕಾಂಕ್ಷಿಗಳಿಗೆ ಮುಂದಿನ ಬಾರಿ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತು. ಆಕಾಂಕ್ಷಿಗಳಾಗಿದ್ದ ಡಾ.ಕೃಷ್ಣ, ಅಶೋಕ್‌ಜಯರಾಂ ಜೆಡಿಎಸ್ ತೊರೆದು ಕೈ ಸೇರ್ಪಡೆಗೊಂಡರು. ಈಗ ಕೀಲಾರ ರಾಧಾಕೃಷ್ಣ ಕೂಡ ಕಾಂಗ್ರೆಸ್ ಸೇರುವ ಸಿದ್ಧತೆಯಲ್ಲಿದ್ದಾರೆ. ಆದರೆ, ಈ ಬಾರಿ ಅಭ್ಯರ್ಥಿ ಆಯ್ಕೆ ಕಳೆದ ಬಾರಿಗಿಂತ ಕಗ್ಗಂಟಾಗಿ ಪರಿಣಮಿಸಲಿದೆ.
ಇಕ್ಕಟ್ಟಿನಲ್ಲಿ ಸಿಲುಕಿದ ಶಾಸಕ ಎಂ.ಶ್ರೀನಿವಾಸ್ :ಹಾಲಿ ಶಾಸಕ ಎಂ.ಶ್ರೀನಿವಾಸ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಒಂದು ವೇಳೆ ಟಿಕೆಟ್ ಕೈತಪ್ಪಿದರೆ ತಮ್ಮ ಅಳಿಯ ಜಿಪಂ ಮಾಜಿ ಸದಸ್ಯ ಎಚ್.ಎನ್.ಯೋಗೇಶ್, ಆಪ್ತ ಕೆ.ಎಸ್. ವಿಜಯಾನಂದ ಇಬ್ಬರಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಇದು ಶಾಸಕ ಎಂ.ಶ್ರೀನಿವಾಸ್‌ಗೂ ತಲೆ ನೋವಾಗಿ ಪರಿಣಮಿಸಿದೆ. ಎಚ್.ಎನ್.ಯೋಗೇಶ್ ಹಾಗೂ ಕೆ.ಎಸ್.ವಿಜಯಾನಂದ ಇಬ್ಬರೂ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಮುನ್ನಲೆಯಲ್ಲಿರುವ ಟಿಕೆಟ್ ಆಕಾಂಕ್ಷಿಗಳು : ಜೆಡಿಎಸ್‌ನಲ್ಲಿ ಸದ್ಯಕ್ಕೆ ನಾಲ್ವರು ಆಕಾಂಕ್ಷಿಗಳು ಮುನ್ನಲೆಯಲ್ಲಿದ್ದಾರೆ. ಶಾಸಕ ಎಂ.ಶ್ರೀನಿವಾಸ್, ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಜಿಪಂ ಮಾಜಿ ಸದಸ್ಯ ಎಚ್.ಎನ್.ಯೋಗೇಶ್ ಹಾಗೂ ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯಾನಂದ ಹೆಸರು ಬಲವಾಗಿ ಕೇಳಿ ಬರುತ್ತಿವೆ. ಆದರೆ ಜೆಡಿಎಸ್ ವರಿಷ್ಠರು ಯಾರಿಗೆ ಟಿಕೆಟ್ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು.
– ಎಚ್.ಶಿವರಾಜು