Advertisement
ಶಾಸಕ ರವೀಂದ್ರ ಶ್ರೀಕಂಠಯ್ಯ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅಲ್ಲದೆ, ಈಗಾಗಲೇ ತಗ್ಗಹಳ್ಳಿ ವೆಂಕಟೇಶ್ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಜೆಡಿಎಸ್ ನಿಂದ ದೂರ ಉಳಿದಿದ್ದಾರೆ. ಇನ್ನೂ ಕೆಲವರು ಜೆಡಿಎಸ್ ಪಕ್ಷ ತೊರೆದಿದ್ದಾರೆ.
Related Articles
Advertisement
ಗಾಳ ಹಾಕುತ್ತಿರುವ ರಮೇಶ್, ಸಚ್ಚಿ: ಜೆಡಿಎಸ್ ಪಕ್ಷದಲ್ಲಿನ ಮುಖಂಡರು, ಕಾರ್ಯಕರ್ತರ ಒಡಕಿನ ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಹಾಗೂ ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿ ದಾನಂದ ಪಡೆಯಲು ಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಜೆಡಿಎಸ್ ಅತೃಪ್ತರ ಸಭೆಗೆ ದಿಢೀರ್ ಆಗಮಿಸಿದ ರಮೇಶ್ ಬಾಬು ಹಲವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಅಲ್ಲದೆ, ಈಗಲೂ ಜೆಡಿಎಸ್ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಇನ್ನೂ ಸಚ್ಚಿದಾನಂದ ಅಸಮಾಧಾನಿತರನ್ನು ಸಮಾಧಾನ ಮಾಡುವ ಮೂಲಕ ಕಮಲಕ್ಕೆ ಸೆಳೆಯುತ್ತಿದ್ದಾರೆ. ಮತ್ತೂಂದೆಡೆ ತಗ್ಗಹಳ್ಳಿ ವೆಂಕಟೇಶ್ ಪಕ್ಷ ಬಿಡದೆ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡುತ್ತಾ, ಕಾರ್ಯಕರ್ತರ ಮನವೊಲಿಸುವ ಕೆಲಸದಲ್ಲಿ ತೊಡಗಿದ್ದಾರೆ.
ನೋಟಿಸ್ ನೀಡಿದ ಜೆಡಿಎಸ್: ಕಳೆದ ಒಂದೂವರೆ ವರ್ಷದಿಂದಲೇ ತಗ್ಗಹಳ್ಳಿ ವೆಂಕಟೇಶ್ ಜೆಡಿಎಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ನನ್ನನ್ನು ನಿರ್ಲಕ್ಷ್ಯಸಲಾಗುತ್ತಿದೆ. ಯಾವುದೇ ಸಭೆ, ಸಮಾರಂಭಗಳಿಗೆ ಆಹ್ವಾನ ನೀಡದೆ ಅವಮಾನಿಸಲಾಗುತ್ತಿದೆ ಎಂದು ದೂರಿದ್ದರು. ಆಗಲೇ ಕರೆದು ಮಾತುಕತೆ ಮೂಲಕ ಬಗೆಹರಿಸಬಹುದಾಗಿದ್ದ ಸಮಸ್ಯೆ ಯನ್ನು ಈಗ ಬಂಡಾಯ ಸಾರಿದ ಮೇಲೆ ಶಾಸಕರ ಒತ್ತಡಕ್ಕೆ ಮಣಿದು ನೋಟಿಸ್ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ತಿಳಿದು ಬಂದಿದೆ. ಆದರೆ, ಇದುವರೆಗೂ ನನಗೆ ನೋಟಿಸ್ ತಲುಪಿಲ್ಲ. ನೋಟಿಸ್‌ಗೆ ಸೂಕ್ತ ಉತ್ತರವನ್ನು ನೀಡಲಾಗುವುದು. ಇದೆಲ್ಲವೂ ನಿಷ್ಠಾವಂತ ಕಾರ್ಯಕರ್ತರಿಗೆ ತಿಳಿಯಲಿದೆ ಎಂದು ತಗ್ಗಹಳ್ಳಿ ವೆಂಕಟೇಶ್ ಉದಯವಾಣಿಗೆ ತಿಳಿಸಿದರು.
ಮತಗಳು ಛಿದ್ರ ಆಗುವ ಭೀತಿ : ಪ್ರಸ್ತುತ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಜೆಡಿಎಸ್ ಮತಗಳು ಛಿದ್ರವಾಗುವ ಭೀತಿ ಎದುರಾಗಿದೆ. ಒಂದೆಡೆ ತಗ್ಗಹಳ್ಳಿ ವೆಂಕಟೇಶ್ ಬಂಡಾಯ ವಾಗಿ ಸ್ಪರ್ಧಿಸಿದರೆ, ಕೊತ್ತತ್ತಿ ಸೇರಿದಂತೆ ಇತರೆ ಹೋಬಳಿಗಳಲ್ಲೂ ಮತ ಸೆಳೆಯುವ ಸಾಮರ್ಥ್ಯ ಹೊಂದಿದ್ದಾರೆ. ಮತ್ತೂಂದೆಡೆ ಮಾಜಿ ಶಾಸಕ ರಮೇಶ್ ಬಾಬು ಜೆಡಿಎಸ್ ಕಾರ್ಯಕರ್ತರ ನಡುವೆ ನನಗೆ ಅವಿನಾಭಾವ ಸಂಬಂಧವಿದೆ ಎಂಬ ಹಿನ್ನೆಲೆಯಲ್ಲಿ ಭಾವನಾತ್ಮಕವಾಗಿ ಸೆಳೆಯುತ್ತಿದ್ದಾರೆ. ಇದರಿಂದ ಒಂದಷ್ಟು ಜೆಡಿಎಸ್ ಮತಗಳು ಕೈತಪ್ಪುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
● ಎಚ್.ಶಿವರಾಜು