Advertisement

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

09:16 PM Apr 17, 2024 | Team Udayavani |

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ರಾಜಕೀಯ ಹಣಾಹಣಿ ರಂಗೇರುತ್ತಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸುಮಲತಾ ಅಂಬರೀಶ್‌ ಬೆಂಬಲ ಘೋಷಿಸಿದ ಬೆನ್ನಲ್ಲೇ, ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮಂಡ್ಯದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರ ಎ. 18ರಂದು ಮಳವಳ್ಳಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

Advertisement

ಶಾಸಕ ಪಿ.ಎಂ. ನರೇಂದ್ರಸ್ವಾಮಿ ನೇತೃತ್ವದಲ್ಲಿ ಗುರುವಾರ ಕ್ಷೇತ್ರಕ್ಕೆ ಆಗಮಿಸಲಿರುವ ದರ್ಶನ್‌ ಬೆಳಗ್ಗೆ 9ರಿಂದ ಸಂಜೆ 5ರವರೆಗೂ ಕ್ಷೇತ್ರದಲ್ಲಿ ಸಂಚಾರ ನಡೆಸಿ, ಸ್ಟಾರ್‌ ಚಂದ್ರು ಪರ ಚುನಾವಣ ಪ್ರಚಾರ ನಡೆಸಲಿದ್ದಾರೆ. ಕಳೆದ ಬಾರಿ ಸಂಸದೆ ಸುಮಲತಾ ಅಂಬರೀಶ್‌ ಪರ ಪ್ರಚಾರ ನಡೆಸಿ ಅವರ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ದರ್ಶನ್‌ ಇದೀಗ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸುತ್ತಿದ್ದಾರೆ.

ಈಗಾಗಲೇ ಸುಮಲತಾ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಆದರೂ ದರ್ಶನ್‌ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಹೋಗುತ್ತಿರುವುದು ಕುತೂಹಲ ಹೆಚ್ಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next