Advertisement

ಮಂಡ್ಯ : ಪಿಯುಸಿ ವಿದ್ಯಾರ್ಥಿಗಳಾಗಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆ

02:24 PM Feb 06, 2022 | Team Udayavani |

ಮಂಡ್ಯ: ಪ್ರೇಮಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

Advertisement

ತಾಲ್ಲೂಕಿನ ಚೊಟ್ಟನಹಳ್ಳಿ ಗ್ರಾಮದ ರಶ್ಮಿ(17) ಮತ್ತು ಆಲದಹಳ್ಳಿ ಗ್ರಾಮದ ಶಶಾಂಕ್ ಗೌಡ(18) ಇಬ್ಬರು ಪಟ್ಟಣದ ಶಾಂತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ರಶ್ಮಿ ಶನಿವಾರ ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇದ್ದರಿಂದ ಮನನೊಂದ ಶಶಾಂಕ್ ಗೌಡ ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಪೊಲೀಸರು ಸ್ಥಳಗಳಿಗೆ ತೆರಳಿ ಪರೀಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next