Advertisement

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

10:20 AM Jul 03, 2024 | Team Udayavani |

ಮಂಡ್ಯ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ನೇಮಕ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್.ಯತೀಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

Advertisement

ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರು ಹಿಂದೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಕಮಿಷನರೇಟ್ ಘಟಕದಲ್ಲಿ ಅಪರಾಧ ಹಾಗೂ ಸಂಚಾರ ವಿಭಾಗದಲ್ಲಿ ಉಪ ಪೊಲೀಸ್ ಆಯುಕ್ತರಾಗಿ ಹಾಗೂ ತುಮಕೂರು ಜಿಲ್ಲಾ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು.

ಎನ್.ಯತೀಶ್ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ 3 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next