Advertisement

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

06:58 PM Oct 28, 2020 | mahesh |

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿಯ ಲಿಂಗಪಟ್ಟಣ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ಪ್ರಸಾದ ಸೇವಿಸಿದ ಮಕ್ಕಳು ಸೇರಿದಂತೆ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ.

Advertisement

ಗ್ರಾಮದ ಮಧ್ಯೆ ಭಾಗದಲ್ಲಿರುವ ಮಾರಮ್ಮ ದೇವಸ್ಥಾನದಲ್ಲಿ ಪ್ರತಿ ಮಂಗಳವಾರದಂತೆ ಸಂಜೆ ವಿಶೇಷ ಪೂಜೆ ನಡೆಸಿ ನಂತರ ಪೊಂಗಲ್ ಹಾಗೂ ಪುಳಿಯೊಗರೆ ತಯಾರಿಸಿ ಪ್ರಸಾದ ರೂಪದಲ್ಲಿ ನೀಡಲಾಗಿದೆ. ಸುಮಾರು 100ಕ್ಕೂ ಹೆಚ್ಚು ಮಂದಿ ಭಕ್ತರು ಪ್ರಸಾದ ಸೇವಿಸಿದ್ದಾರೆ. ಆಹಾರ ಸೇವಿಸಿದ ಕೆಲ ಸಮಯದ ನಂತರ 70ಕ್ಕೂ ಮಂದಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡು ಅಸ್ವಸ್ಥರಾದರು. ತಕ್ಷಣ ಇವರನ್ನು ಸರ್ಕಾರಿ ಶಾಲೆಯ ಆವರಣದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ.

ತೀವ್ರ ಅಸ್ವಸ್ಥಗೊಂಡವರಲ್ಲಿ ಶ್ರೇಯಾ(14), ದರ್ಶನ್(18), ಲಿಂಗೇಗೌಡ(41), ಜ್ಯೋತಿಕಾ(20), ಐಶ್ವರ್ಯ(17), ಶಿಲ್ಪಾ(28), ಲಿಖಿತಾ(19) ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಲಿಂಗಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 10 ಮಂದಿ ಹಲಗೂರು ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿಗಾವಹಿಸಲಾಗಿದೆ. ಅಸ್ವಸ್ಥರೆಲ್ಲರೂ ಆರೋಗ್ಯವಾಗಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next