Advertisement

Abishek Ambareesh; ಅಭಿಷೇಕ್ ವಿವಾಹಕ್ಕೆ ಪ್ರಧಾನಿಗೆ ಆಹ್ವಾನ ನೀಡಿದ ಸುಮಲತಾ

06:43 PM Apr 05, 2023 | Team Udayavani |

ನವದೆಹಲಿ : ಅಭಿಷೇಕ್ ಅಂಬರೀಶ್ ಅವರ ವಿವಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಿಜೆಪಿಗೆ ಬೆಂಬಲ ಘೋಷಿಸಿರುವ ಮಂಡ್ಯ ಸಂಸದೆ ಸುಮಲತಾ ಮತ್ತು ಅಭಿಷೇಕ್ ಅವರು ಪ್ರಧಾನಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದರು.

Advertisement

ಸಂಸದೆ ಸುಮಲತಾ ”ಭಾರತಕ್ಕೆ ಮತ್ತು ಕರ್ನಾಟಕಕ್ಕೆ ಇಂತಹ ಭರವಸೆಯ ನಾಯಕರು ಮತ್ತು ನಾಯಕತ್ವ ಅಗತ್ಯವಿದೆ ಎನ್ನುವ ದೃಢವಾದ ನಂಬಿಕೆ ನನ್ನದು. ಅಭಿಷೇಕ್ ಅಂಬರೀಶ್ ಅವರ ಮದುವೆಗೆ ಆಗಮಿಸುವಂತೆ ಅವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆಯಲಾಯಿತು.” ಎಂದು ಟ್ವೀಟ್ ಮಾಡಿದ್ದಾರೆ.

”ಇದೇ ಸಂದರ್ಭದಲ್ಲಿ ರಾಜ್ಯದ ಮತ್ತು ನನ್ನ ಮಂಡ್ಯ ಕ್ಷೇತ್ರದ ಬಗ್ಗೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ಮಾನ್ಯ ಪ್ರಧಾನಿಗಳು ಮಂಡ್ಯಕ್ಕೆ ಬಂದಾಗ ನನ್ನ ಸ್ವಾಭಿಮಾನಿ ಜನತೆ ಅವರನ್ನು ಬರಮಾಡಿಕೊಂಡ ರೀತಿಯನ್ನು ನೆನಪಿಸಿಕೊಂಡು ಶ್ಲ್ಯಾಘಿಸಿದರು. ಮಂಡ್ಯ ಹಾಗೂ ಕರ್ನಾಟಕದ ಬಗ್ಗೆ ಅವರಿಗಿರುವ ಅಪಾರವಾದ ಅಭಿಮಾನಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು.” ಎಂದು ಇನ್ನೊಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ಇತ್ತೀಚಿಗಷ್ಟೇ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ನಿಶ್ಚಿತಾರ್ಥ ಸಂಭ್ರಮದಿಂದ ನೆರವೇರಿತ್ತು. ಜೂನ್ 5ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿಅದ್ದೂರಿಯಾಗಿ ವಿವಾಹ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next