ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-275 ಈಗ ಸೂಪರ್ ಫಾಸ್ಟ್ ಮಾರ್ಗವಾಗಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಮಂಡ್ಯ ನಗರದಲ್ಲಿ 100 ಬೆಡ್‌ಗಳ ಹೊಸ ಟ್ರಾಮಾ ಕೇರ್ ಆಸ್ಪತ್ರೆಯ ಅವಶ್ಯಕತೆ ಇದೆ. ಆದ್ದರಿಂದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಸೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಿಫಾರಸು ಮಾಡುವಂತೆ ಸ್ಥಳೀಯ ಸಂಸ್ಥೆಗಳ ಶಾಸಕ ದಿನೇಶ್ ಗೂಳಿಗೌಡ ಅವರ ನಿಯೋಗ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಅವರು, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾ ರಿಯು ಈಗ ಸೂಪರ್ ಫಾಸ್ಟ್ ಮಾರ್ಗವಾಗಿದೆ. ಇಲ್ಲಿ ವಾಹನಗಳು ಹೆಚ್ಚಾಗಿ ಓಡಾಡುವುದರಿಂದ ಅಫಘಾತ ಗ ಳು ಸಂಭವಿಸಿದರೆ ಮೈಸೂರು ಅಥವಾ ಬೆಂಗಳೂರಿಗೆ ಗಾಯಾಳುಗಳನ್ನು ದಾಖಲಿಸಬೇಕಾದ ಪರಿಸ್ಥಿತಿ ಇದೆ. ಇದು ಬಹಳವೇ ದೂರವಾಗುತ್ತದೆ. ಇಂಥ ಸಂದರ್ಭ ದಲ್ಲಿ ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಕೆಲವು ಅಗತ್ಯ ತ್ವರಿತ ಚಿಕಿತ್ಸೆಯ ಅಗತ್ಯತೆ ಇದೆ. ಆದರೆ, ಬೆಂಗಳೂರು ಇಲ್ಲವೇ ಮೈಸೂರಿಗೆ ಕರೆದುಕೊಂಡು ಹೋಗುವಷ್ಟರಲ್ಲಿ ಪ್ರಾಣ ಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಪ್ರತಿಯೊಬ್ಬರ ಜೀವವೂ ಅಮೂಲ್ಯವಾಗಿದೆ. ಇದಕ್ಕಾಗಿ ಮಂಡ್ಯ ನಗರ ದಲ್ಲಿ 100 ಬೆಡ್‌ಗಳ ಹೊಸ ಟ್ರಾಮಾ ಕೇರ್ ಆಸ್ಪತ್ರೆಯನ್ನು ತೆರೆಯಬೇಕು ಎಂದು ಮನವರಿಕೆ ಮಾಡಿದರು.
ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಾರಂಭಿಸಿ: ಮೈಸೂರು-ಬೆಂಗಳೂರು ನಗರಗಳ ಮಧ್ಯದಲ್ಲಿ ಇರುವ ಮಂಡ್ಯ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇದ್ದು, ಸುಮಾರು 150 ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸದಾ ಲಭ್ಯವಿರುತ್ತಾರೆ. ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಂತೆ ಇರುವ 5 ಎಕರೆ ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸುತ್ತಿರುವುದರಿಂದ ಆ ಜಾಗದಲ್ಲಿ 100 ಬೆಡ್‌ಗಳ ಟ್ರಾಮಾ ಕೇರ್ ಆಸ್ಪತ್ರೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತ್ವರಿತವಾಗಿ ಹೊಸದಾಗಿ ಪ್ರಾರಂಭಿಸ ಬಹು ದಾಗಿದೆ ಎಂದು ತಿಳಿಸಿದರು.
ಈ ಎಲ್ಲ ಅಗತ್ಯತೆ ಹಾಗೂ ಅವಕಾಶಗಳ ಬಗ್ಗೆ ಮುಖ್ಯ ಮಂತ್ರಿ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿ ಆಯ ವ್ಯಯದಲ್ಲಿ ಸೇರ್ಪಡೆಗೊಳಿಸಲು ಶಿಫಾ ರಸು ಮಾಡ ಬೇಕೆಂದು ಮನವಿ ಸಲ್ಲಿಸಿದರು.
ಪಕ್ಷದ ಮುಖಂಡ ಎಸ್.ಗುರುಚರಣ್, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಣ್ಣ, ಮಾಜಿ ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡ ರಾದ ಜೋಗಿಗೌಡ, ಸಂದರ್ಶ್, ರಾಘು ಹಾಗೂ ಪ್ರಶಾಂತ್ ಹಾಜರಿದ್ದರು. ನಂತರ ಆರೋಗ್ಯ ಸಚಿವ ಡಾ. ಕೆ.ಸುಧಾ ಕರ್ ಅವರಿಗೆ ಮನವಿ ಮಾಡಿ ಆಸ್ಪತ್ರೆಯ ಅವಶ್ಯಕತೆ ಬಗ್ಗೆ ಶಾಸಕ ದಿನೇಶ್‌ಗೂಳಿಗೌಡ ಮನವಿ ಮಾಡಿದ್ದಾರೆ.