ಮದ್ದೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ಮೂವರು ಮಕ್ಕಳಿಗೂ ವಿಷ ಉಣ್ಣಿಸಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ರಾವಕ ಘಟನೆ ಪಟ್ಟಣದ ಹೊಳೆಬೀದಿಯಲ್ಲಿ ನಡೆದಿದೆ.
ಹೊಳೆ ಬೀದಿಯ ನಿವಾಸಿ ಕಾರ್ ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ (30), ಪುತ್ರ ಹಾರಿಸ್ (7) ಆಲಿಸಾ (4) ಹಾಗೂ ಅನಮ್ ಪಾತಿಮಾ (2) ಎಂಬ ಇಬ್ಬರು ಹೆಣ್ಣು ಮಕ್ಕಳು ಒಟ್ಟು ನಾಲ್ವರು ಮೃತ ಪಟ್ಟವರು.
ಉಸ್ನಾಕೌಸರ್ ಪಟ್ಟಣದ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ಕೆಲಸ ಮಾಡುತ್ತಿದ್ದು, ಗಂಡ ಅಖಿಲ್ ಚನ್ನಪಟ್ಟಣದಲ್ಲಿ ಮೆಕಾನಿಕಲ್ ಕೆಲಸ ನಿರ್ವಹಿಸುತ್ತಿದ್ದಾರೆ.
ಗುರುವಾರ ಸಂಜೆ ಮನೆಯಲ್ಲಿ ತಾಯಿ ಮತ್ತು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ಮನೆಯವರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Related Articles
ಘಟನೆಗೆ ನಿಖರವಾದ ಕಾರಣ ಏನೆಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದ್ದ, ಪಟ್ಟಣದ ಪೊಲೀಸರು ಪ್ರಕರಣ ದಾಖಾಲಿಸಿಕೊಂಡು ತನಿಖಾ ಕಾರ್ಯ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ