Advertisement
ರವಿವಾರ ಮಂಡ್ಯದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದ ಜೆಡಿಎಸ್ ನಾಯಕ ಕುಮಾರಸ್ವಾಮಿ, ಸ್ಪರ್ಧೆ ಮಾಡುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಲು ಒಂದು ದಿನ ಸಮಯ ಕೊಡಿ, ಚನ್ನಪಟ್ಟಣದ ಕಾರ್ಯಕರ್ತರನ್ನು ಕರೆದು ಮಾತನಾಡುತ್ತೇನೆ ಎಂದಿದ್ದರು. ಅದರಂತೆ ಸೋಮವಾರ ಬೆಂಗಳೂರಿನಲ್ಲಿ ಚನ್ನಪಟ್ಟಣದ ಮುಖಂಡರು, ಕಾರ್ಯಕರ್ತರ ಜತೆ ಸಭೆ ನಡೆಸಿದರು.
ಸಭೆಯಲ್ಲಿ ಚನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಸಮಾಧಾನಪಡಿಸಿ, ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಟ್ಟ ಎಚ್.ಡಿ. ಕುಮಾರಸ್ವಾಮಿ, ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇದರೊಂದಿಗೆ ಅಮಿತ್ ಶಾ ಸಹಿತ ಬಿಜೆಪಿ ವರಿಷ್ಠರು ಕೂಡ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ನನಗೆ ಸಲಹೆ ನೀಡಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಮಂಡ್ಯದಿಂದ ಸ್ಪರ್ಧಿಸುವ ಅನಿವಾರ್ಯ ಎದುರಾಗಿದೆ. ನೀವು ನನಗೆ ಸಮ್ಮತಿ ನೀಡಿ ಎಂದು ಸಭೆಯಲ್ಲಿ ಮನವಿ ಮಾಡಿದ್ದಾರೆ.
Related Articles
ಕಾರ್ಯಕರ್ತನ ಯತ್ನ
“ಕುಮಾರಣ್ಣ ಚನ್ನಪಟ್ಟಣ ಬಿಟ್ಟು ಹೋಗಬಾರದು’ ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತನೊಬ್ಬ ಹರಿತ ವಸ್ತುವಿನಿಂದ ಕೈ ಕುಯ್ದುಕೊಳ್ಳಲು ಮುಂದಾದ ಘಟನೆ ನಡೆದಿದೆ. ಚನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರ ಜತೆಗೆ ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದಾಗ ಈ ಹೈಡ್ರಾಮ ನಡೆದಿದೆ. ಈ ವೇಳೆಗೆ ಮಧ್ಯಪ್ರವೇಶಿಸಿದ ಇತರ ಕಾರ್ಯಕರ್ತರು ಆತನ ಕೈಯಲ್ಲಿದ್ದ ಹರಿತ ವಸ್ತು ಕಿತ್ತುಕೊಂಡರು. ಜತೆಗೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಬಳಿಕ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು.
Advertisement
ಇಂದು ಕೋರ್ ಕಮಿಟಿ ಸಭೆಮಂಡ್ಯ, ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣ ರಣತಂತ್ರದ ಬಗ್ಗೆ ಚರ್ಚಿಸಲು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸದಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆ ಬಳಿಕ ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಅಧಿಕೃತ ಘೋಷಣೆ ಆಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.