Advertisement

ಮಂಡ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ ; ಶಿಕ್ಷಕರ ಸಂಘದ ಉಪಾಧ್ಯಕ್ಷ ಪಾರು

07:35 PM May 16, 2022 | Team Udayavani |

ಮಂಡ್ಯ: ತಾಲೂಕಿನ ಬಸರಾಳು ಸಮೀಪದ ಕೋಡಿಕೊಪ್ಪಲು ಗ್ರಾಮದ ಮಂಡ್ಯ- ನಾಗಮಂಗಲ ರಸ್ತೆ ಪಕ್ಕದಲ್ಲಿ ಇದ್ದ ಮರವೊಂದು ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿರುವ ಘಟನೆ ಸೋಮವಾರ ಮಧ್ಯಾಹ್ನ 2;30ರ ಸುಮಾರಿಗೆ  ನಡೆದಿದೆ.

Advertisement

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೆ.ನಾಗೇಶ್ ಹಾಗೂ ಕಾರಿನ ಚಾಲಕ ಕೋಡಿಕೊಪ್ಪಲು ಸರ್ಕಾರಿ ಶಾಲೆ ಆರಂಭಗೊಂಡ ಹಿನ್ನೆಲೆಯಲ್ಲಿ ಶಾಲೆಗೆ ತೆರಳಿ ವಾಪಸ್ ಮಂಡ್ಯಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮರವನ್ನು ಕತ್ತರಿಸಿ ಕಾರಿನಲ್ಲಿದ್ದವರನ್ನು ಹೊರಗೆ ಬರಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
ಮಂಡ್ಯದಿಂದ ನಾಗಮಂಗಲಕ್ಕೆ ಹೋಗುವ ರಸ್ತೆಯ ಎರಡೂ ಬದಿಗಳಲ್ಲೂ ಒಣಗಿದ ಮರಗಳು ಸೇರಿದಂತೆ ಅಪಾಯಕ್ಕೆ ಆಹ್ವಾನ ನೀಡುವ ಮರಗಳು ಇವೆ. ಇವು ಯಾವ ಸಮಯದಲ್ಲಾದರೂ ರಸ್ತೆಗೆ ಬೀಳುವ ಸ್ಥಿತಿಯಲ್ಲಿವೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ರಸ್ತೆ ಪಕ್ಕದಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ವಿವೋ ಹೊಸ ಫೋನ್‌ ಬಿಡುಗಡೆ; 5000 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

Advertisement

Udayavani is now on Telegram. Click here to join our channel and stay updated with the latest news.

Next