Advertisement

ಸೋಲಿನ ಬಳಿಕ ಮಂಡ್ಯ ಕಡೆಗಣನೆ

01:37 AM Jun 28, 2019 | Sriram |

ಬೆಂಗಳೂರು: ಕಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಪರಾಭವಗೊಂಡ ನಂತರ ಮುಖ್ಯಮಂತ್ರಿಗಳು ಮಂಡ್ಯದ ಜನರನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಮಂಡ್ಯದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಇತ್ತ ಗಮನ ಹರಿಸದೆ ಕಬ್ಬು ಬೆಳೆಗಾರರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಮಂಡ್ಯದಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ನೀರು ಹರಿಸಬೇಕು ಹಾಗೂ ಮಂಡ್ಯ, ಪಾಂಡವಪುರ ಸಕ್ಕರೆ ಕಾರ್ಖಾನೆಗಳನ್ನು ತೆರೆದು ಕಟಾವಿಗೆ ಬಂದಿರುವ ಕಬ್ಬು ಅರೆಯಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ವತಿಯಿಂದ ಐದಾರು ದಿನಗಳಿಂದ ಧರಣಿ ನಡೆಸುತ್ತಿದೆ. ಹಾಗಿದ್ದರೂ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರ ಆಂತರಿಕ ಕಚ್ಚಾಟದಲ್ಲಿ ನಿರತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ದರ್ಪದ ಆಡಳಿತದಲ್ಲಿ ರೈತರ ಬೇಡಿಕೆಗಳಿಗೆ ಸ್ಪಂದಿಸುವವರೇ ಇಲ್ಲದಂತಾಗಿದ್ದು, ರಾಜ್ಯದ ಜನರಿಗೆ ಅದರಲ್ಲೂ ರೈತರ ಪಾಲಿಗೆ ಸರ್ಕಾರ ಇದ್ದು ಸತ್ತಂತಿದೆ. ಇಷ್ಟಾದರೂ ರಾಜ್ಯ ಸರ್ಕಾರ ಸ್ಪಂದಿಸದೆ ಉದ್ಧಟತನ ತೋರುತ್ತಿರುವುದು ಖಂಡನೀಯ. ಬೆಳೆದು ನಿಂತಿರುವ ಕಬ್ಬು ಕಟಾವಿಗೆ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಸಕ್ಕರೆ ಕಾರ್ಖಾನೆ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next