Advertisement

ಸಚಿವೆ ಮನೇಕಾ ಗಾಂಧಿ ಅಸ್ವಸ್ಥ; ಏಮ್ಸ್‌ಗೆ ದಾಖಲು

03:45 AM Jun 03, 2017 | Team Udayavani |

ನವದೆಹಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಮೂತ್ರಕೋಶದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದಾರೆ. 

Advertisement

ಶುಕ್ರವಾರ ಅವರು ತಮ್ಮ ಲೋಕಸಭಾ ಕ್ಷೇತ್ರ ಪಿಲಿಭಿಟ್‌ಗೆ ಭೇಟಿ ನೀಡಿದ್ದ ವೇಳೆ ತೀವ್ರ ಸ್ವರೂಪದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾ ಯಿತು. ಅಲ್ಟ್ರಾಸೌಂಡ್‌ ಸ್ಕ್ಯಾನ್‌ಗೆ ಒಳಪಡಿಸಿದಾಗ ಮೂತ್ರಕೋಶದ ಕಲ್ಲು ಸಮಸ್ಯೆಯಿರುವುದು ತಿಳಿದುಬಂದಿದ್ದು, ನಂತರ ಅವರನ್ನು ವಿಮಾನದ ಮೂಲಕ ದೆಹಲಿಯ ಏಮ್ಸ್‌ಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next