Advertisement

ಲೈಂಗಿಕ ಕಿರುಕುಳ ಬಾಲಕರಿಗೂ ನ್ಯಾಯಬೇಕು

06:00 AM Apr 26, 2018 | Team Udayavani |

ಹೊಸದಿಲ್ಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳಿಗೆ ಅತ್ಯಾಚಾರವೆಸಗಿದವರಿಗೆ ಗಲ್ಲು ಶಿಕ್ಷೆ ಸುಗ್ರೀವಾಜ್ಞೆ ಜಾರಿಗೊಂಡ ಬಳಿಕ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕರಿಗೂ ನ್ಯಾಯ ದೊರೆಯುವಂತಾಗಬೇಕು ಎಂದು ಆಗ್ರಹಿಸಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕರ ಅಧ್ಯಯನ ನಡೆಸಲಾಗುತ್ತಿದೆ. ಇಂಥ ಕ್ರಮ ಇದೇ ಮೊದಲ ಬಾರಿಗೆ ನಡೆಸಲಾಗುತ್ತಿದೆ ಎಂದಿದ್ದಾರೆ. 

Advertisement

“ಬಾಲಕಿಯರಂತೆ ಬಾಲಕರೂ ಕೂಡ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುತ್ತಾರೆ. ಮಕ್ಕಳಿಗೆ ಲೈಂಗಿಕ ಕಿರುಕುಳ ವಿಚಾರದಲ್ಲಿ ಹುಡುಗ, ಹುಡುಗಿ ಎಂದು ತಾರತಮ್ಯ ಮಾಡಬಾರದು’ಎಂದು ಸಚಿವೆ ಹೇಳಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಈ ಬದಲಾವಣೆ ಬಗ್ಗೆ ಸಚಿವರು ಪ್ರಸ್ತಾಪ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next