Advertisement

ಬೆಳಗಾವಿ ಲೋಕ ಸಭಾ ಉಪಕದನ : ಮಂಗಲಾ ಅಂಗಡಿ 2185 ಮತಗಳ ಮುನ್ನಡೆ

09:46 AM May 02, 2021 | Team Udayavani |

ಬೆಳಗಾವಿ : ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

Advertisement

ಬೆಳಗಾವಿಯಲ್ಲಿ ಕಾಂಗ್ರೆಸ್ ನಿಂದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯಿಂದ ಮಾಜಿ ಸಂಸದ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರು ಸ್ಪರ್ಧೆ ನಡೆಸಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆ ಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ನಡೆದಿದ್ದು ಈಗ ಲಭ್ಯವಾಗಿರುವ ಮಾಹಿತಿಯಂತೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು 2185 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮಂಗಲಾ ಅಂಗಡಿ ಅವರು 39369 ಮತಗಳನ್ನು ಪಡೆದುಕೊಂಡಿದ್ದರೆ ಕಾಂಗ್ರೆಸ್ ನ ಸತೀಶ ಜಾರಕಿಹೊಳಿ 37184 ಮತಗಳನ್ನು ಪಡೆದಿದ್ದಾರೆ. ಎಂ ಇ ಎಸ್ ಬೆಂಬಲಿತ ಅಭ್ಯರ್ಥಿ ಶುಭಂ ಸೇಳಕೆ 12843 ಮತಗಳನ್ನು ಗಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next