Advertisement

ದಿ.ಸುರೇಶ್ ಅಂಗಡಿ ಪತ್ನಿ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರಿಗೆ ಕೋವಿಡ್ ದೃಢ

12:38 PM Apr 27, 2021 | Team Udayavani |

ಬೆಳಗಾವಿ: ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಧರ್ಮಪತ್ನಿ ಹಾಗೂ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ.

Advertisement

ಕೋವಿಡ್ ಪಾಸಿಟಿವ್ ಬಂದ್ ಬಗ್ಗೆ ಫೇಸ್‍ಬುಕ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಂಗಳಾ ಅಂಗಡಿ ಅವರು ರೋಗದ ಲಕ್ಷಣಗಳು ಇಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿರುವೆ. ನನ್ನ ಸಂಪರ್ಕಕ್ಕೆ ಬಂದವರು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸದ್ಯ ಅವರು ಬೆಳಗಾವಿ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕ್ವಾರಂಟೈನ್‍ನಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next