Advertisement

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ…!

04:58 PM Oct 16, 2019 | Team Udayavani |

ಮಂಗಳೂರು: ಜನರ ಎದುರೇ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.

Advertisement

ಸುಮಾರು ಮಧ್ಯ ವಯಸ್ಸಿನ ವ್ಯಕ್ತಿಯೋರ್ವ ಏಕಾಏಕಿ ಜನರು ನೋಡುತ್ತಿದ್ದಂತೆ ನದಿಗೆ ಹಾರಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ದೋಣಿಯಲ್ಲಿ ತೆರಳಿ ಆತನನ್ನ ರಕ್ಷಣೆ ಮಾಡಿದ್ದಾರೆ.

ಬಳಿಕ ಆತನನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಇತ್ತೀಚೆಗೆ ಇದೇ ಸೇತುವೆಯಿಂದ ಹಾರಿ ಕಾಫೀ ಡೇ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next