Advertisement

ಮಂಗಳೂರು: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

12:31 PM Oct 28, 2019 | Naveen |

ಮಂಗಳೂರು: ನರ್ಸಿಂಗ್​  ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನ ಅತ್ತಾವರದ ಪಿಜಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

Advertisement

ಕೇರಳ ಮೂಲದ ಅನುಪಮಾ (23) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿನಿಯು ಸ್ಥಳೀಯ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು.  ಶುಕ್ರವಾರ ರಾತ್ರಿ ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಪ್ರೇಮ ವೈಫಲ್ಯವೇ ಘಟನೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next