Advertisement

ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ತಂದು, ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದ ಪ್ರಯಾಣಿಕ

11:17 AM Oct 28, 2020 | Mithun PG |

ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಪ್ರಯಾಣಿಕನೋರ್ವ, ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಅಬೂಬಕ್ಕರ್ ಸಿದ್ದಿಕ್ ಎಂಬಾತನೇ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:  ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !

ಆರೋಪಿಯು ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ಮೂಲಕ ಬಂದಿದ್ದು, ಪೌಡರ್ ರೂಪದಲ್ಲಿ  ಚಿನ್ನ ಸಾಗಿಸುತ್ತಿರುವುದು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ಪತ್ತೆಯಾಗಿದೆ. ಸುಮಾರು 32,96,800 ರೂ. ಮೌಲ್ಯದ  634 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:  ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?

Advertisement

 

Advertisement

Udayavani is now on Telegram. Click here to join our channel and stay updated with the latest news.

Next